88ನೇ ಭಾರತೀಯ ವಾಯುಪಡೆ ದಿನ: ಶುಭಾಶಯ ಕೋರಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ದೇಶದ ಹೆಮ್ಮೆಯ ವಾಯುಸೇನೆ ಗುರುವಾರ 88ನೇ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ದೇಶದ ಹೆಮ್ಮೆಯ ವಾಯುಸೇನೆ ಗುರುವಾರ 88ನೇ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ.
"ಭಾರತೀಯ ವಾಯುಪಡೆ ಸದಾಕಾಲ ದೇಶದ ಆಗಸವನ್ನು ರಕ್ಷಣೆ ಮಾಡುತ್ತದೆ ಎಂಬ ವಿಶ್ವಾಸ ನನಗಿದೆ. ಏನೇ ಬರಲಿ ಸದಾಕಾಲ ನೀಲಿ ಆಕಾಶ, ಸುರಕ್ಷರಿತರಾಗಿ ಇರುವಂತೆ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ.
ಭಾರತೀಯ ವಾಯುಪಡೆ ದಿನವನ್ನು ಪ್ರಥಮ ಬಾರಿಗೆ 1932, ಅಕ್ಟೋಬರ್ 8 ರಂದು ಆಚರಿಸಲಾಯಿತು. ಅಲ್ಲಿಂದ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದ್ದು, ಈ ವರ್ಷ ಭಾರತವು 87ನೇ ವರ್ಷದ ವಾಯುಪಡೆ ದಿನವನ್ನು ಆಚರಿಸುತ್ತಿದೆ.
ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ.
ಇದಲ್ಲದೆ ದೇಶದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ, ಭಯೋತ್ಪಾದಕರ ದಾಳಿ ನಡೆದಾಗ, ಗಲಭೆಗಳು ನಡೆದಾಗ ಪ್ರಾಣಾಪಾಯದಲ್ಲಿರುವ ಜನರನ್ನು ರಕ್ಷಿಸುವ ಕಾರ್ಯವನ್ನೂ ವಾಯುಸೇನೆ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


