ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕ್ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು: ಭಾರತ
ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್‌ಗೆ ಸಂಬಂಧಿಸಿದ ಪ್ರಕರಣದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಪಾಕಿಸ್ತಾನ ವಿಫಲವಾಗಿದೆ ಎಂದು ಭಾರತ ಹೇಳಿದ್ದು ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ಆದೇಶದಂತೆ ಅಡ್ಡಿ ಆತಂಕ ಇಲ್ಲದ ದೂತಾವಾಸದ ಪ್ರವೇಶಕ್ಕೆ ಒತ್ತಾಯಿಸಿದೆ.

ನವದೆಹಲಿ: ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್‌ಗೆ ಸಂಬಂಧಿಸಿದ ಪ್ರಕರಣದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಪಾಕಿಸ್ತಾನ ವಿಫಲವಾಗಿದೆ ಎಂದು ಭಾರತ ಹೇಳಿದ್ದು ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ಆದೇಶದಂತೆ ಅಡ್ಡಿ ಆತಂಕ ಇಲ್ಲದ ದೂತಾವಾಸದ ಪ್ರವೇಶಕ್ಕೆ ಒತ್ತಾಯಿಸಿದೆ.
ಪಾಕಿಸ್ತಾನದ ನ್ಯಾಯಾಲಯವು ಕುಲಭೂಷಣ್ ಮರಣದಂಡನೆ ವಿರುದ್ಧ ಪರಿಶೀಲನಾ ಅರ್ಜಿಯನ್ನು ವಿಚಾರಣೆಗೆ ಒಳಪಡಿಸುತ್ತಿದೆ.
ಈ ಪ್ರಕರಣದಲ್ಲಿ ಜಾಧವ್ ಅವರನ್ನು ಪ್ರತಿನಿಧಿಸಲು ಭಾರತೀಯ ವಕೀಲರೊಬ್ಬರನ್ನು ನೇಮಕ ಮಾಡುವಂತೆ ಭಾರತ ಒತ್ತಡ ಹೇರುತ್ತಿದ್ದು, 2019ರಲ್ಲಿ ತೀರ್ಪಿನಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಆದೇಶಿಸಿದಂತೆ ಆತನಿಗೆ ಅಡ್ಡಿಯಿಲ್ಲದೆ ದೂತಾವಾಸದ ಪ್ರವೇಶ ಕೋರಿದೆ.
"ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನ ವಿಫಲವಾಗಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒದಗಿಸುವುದು ಮತ್ತು ಅವರಿಗೆ ಯಾವುದೇ ಅಡೆತಡೆಯಿಲ್ಲದ, ಬೇಷರತ್ತಾದ ಮತ್ತು ಅಡೆತಡೆಯಿಲ್ಲದ ದೂತವಾಸ ಪ್ರವೇಶವನ್ನು ಒದಗಿಸಬೇಕಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ಈ ಪ್ರಕರಣದಲ್ಲಿ ಜಾಧವ್ ಅವರನ್ನು ಪ್ರತಿನಿಧಿಸಲು ವಕೀಲರನ್ನು ನೇಮಕ ಮಾಡಲು ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಅಧಿಕಾರಿಗಳು ಇಸ್ಲಾಮಾಬಾದ್ ಹೈಕೋರ್ಟ್‌ಗೆ(ಐಎಚ್‌ಸಿ) ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


