88ನೇ ವಾಯುಸೇನಾ ದಿನ: ವೀರ ಯೋಧರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ
88ನೇ ವಾಯುಸೇನಾ ದಿನ ಹಿನ್ನಲೆಯಲ್ಲಿ ವಾಯುಪಡೆಯ ಧೀರ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: 88ನೇ ವಾಯುಸೇನಾ ದಿನ ಹಿನ್ನಲೆಯಲ್ಲಿ ವಾಯುಪಡೆಯ ಧೀರ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ವಾಯುಪಡೆಯ ದಿನದಂದು ಭಾರತೀಯ ವಾಯುಸೇನೆಯಯ ಎಲ್ಲಾ ವೀರ ಯೋಧರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ನೀವು ದೇಶದ ಆಗಸವನ್ನು ಸುರಕ್ಷಿತವಾಗಿರಿಸುವುದಲ್ಲದೆ, ವಿಪತ್ತು ಸಮಯದಲ್ಲಿ ಮಾನವೀಯತೆಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತೀರಿ. ಭಾರತಾಂಬೆ ರಕ್ಷಿಸಲು ನಿಮ್ಮ ಧೈರ್ಯ, ಶೌರ್ಯ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.
ಇದರಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರೂ ಕೂಡ ವೀರ ಯೋಧರಿಗೆ ಶುಭಾಶಗಳನ್ನು ಕೋರಿದ್ದು, ನಮ್ಮ ವಾಯುಪಡೆಯ ಯೋಧರು, ಮಾಜಿ ಯೋಧರು ಮತ್ತು ಭಾರತೀಯ ವಾಯುಪಡೆಯ ಕುಟುಂಬಸ್ಥರನ್ನು ನಾವು ಹೆಮ್ಮೆಯಿಂದ ಗೌರವಿಸುತ್ತೇವೆ. ನಮ್ಮ ಆಕಾಶವನ್ನು ಭದ್ರಪಡಿಸುವಲ್ಲಿ ಮತ್ತು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರದಲ್ಲಿ ನಾಗರಿಕರಿಗೆ ಸಹಾಯ ಮಾಡುವಲ್ಲಿ ಐಎಎಫ್‌ನ ಕೊಡುಗೆ ಅಪಾರವಾದದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


