ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್ ಸ್ವಾಮಿ ಎನ್ಐಎ ವಶಕ್ಕೆ
ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ(82 ವರ್ಷ) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಂಚಿಯಲ್ಲಿ ಬಂಧಿಸಿದೆ.

ನವದೆಹಲಿ: ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ(82 ವರ್ಷ) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಂಚಿಯಲ್ಲಿ ಬಂಧಿಸಿದೆ.
ಈ ಹಿಂದೆ ಇದೇ ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಸ್ವಾಮಿ ಅವರನ್ನು ಪ್ರಶ್ನಿಸಿರುವ ಪುಣೆ ಪೊಲೀಸ್ ಮತ್ತು ಎನ್‌ಐಎ ತಂಡದರು, ಗುರುವಾರ ಅವರನ್ನು ರಾಂಚಿ ಮನೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಮುಂಬೈಗೆ ವರ್ಗಾಯಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಿಷೇಧಿತ ಸಿಪಿಐ(ಮಾವೊವಾದಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ. ಸ್ಟ್ಯಾನ್ ಸ್ವಾಮಿ ಮಾತ್ರವಲ್ಲದೆ ಈ ಪ್ರಕರಣದಲ್ಲಿ ಹದಿನಾರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ ಮತ್ತು ಭಯೋತ್ಪಾದಕಾ ನಿಗ್ರಹ ಕಾಯ್ದೆ – ಯುಪಿಎಪಿ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


