ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ: ಪಿಯೂಷ್ ಗೋಯಲ್'ಗೆ ಹೆಚ್ಚುವರಿ ಹೊಣೆ
ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಹೊಣೆಯನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.

ನವದೆಹಲಿ: ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಹೊಣೆಯನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.
ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಕಚೇರಿ ಹೇಳಿಕೆ ನೀಡಿದ್ದು, ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ ಎಂದು ತಿಳಿಸಿದೆ.
ಪ್ರಧಾನಮಂತ್ರಿಗಳ ಸಲಹೆಯಂತೆ ರಾಷ್ಟ್ರಪತಿ ಕೋವಿಂದ್ ಅವರು ಸಂಪುಟ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಈಗಾಗಲೇ ರೈಲ್ವೇ, ವಾಣಿಜ್ಯ ಮತ್ತು ಕೈಗಾಲಿಕೆ ಇಲಾಖೆಗಳ ಜೊತೆಗೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಸಚಿವಾಲಯದ ಹೊಣೆಯನ್ನೂ ಹೆಚ್ಚುವರಿಯಾಗಿ ನೀಡಲಾಗಿದೆ ಎಂದು ರಾಷ್ಟ್ರಪತಿಗಳ ಕಚೇರಿ ಮಾಹಿತಿ ನೀಡಿದೆ.
ಕೇಂದ್ರ ಆಹಾರ ಸಚಿವ, ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ ಹಾಗೂ ದೇಶದ ಪ್ರಮುಖ ದಲಿತ ನಾಯಕ ರಾಮವಿಲಾಸ್ ಪಾಸ್ವಾನ್ ಅವರು ಗುರುವಾರ ನಿಧನ ಹೊಂದಿದ್ದಾರೆ. ಕಳೆದ ವಾರ ದೆಹಲಿ ಯಖಾಸಗಿ ಆಸ್ಪತ್ರೆಯಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್ ಅವರು, ಶೀಘ್ರದಲ್ಲೇ ಇನ್ನೊಂದು ಸರ್ಜರಿಗೆ ಒಳಗಾಗಬೇಕಿತ್ತು. ಆದರೆ, ಬಹು ಅಂಗಾಂಗ ವೈಫಲ್ಯದಿಂದ ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದಾರೆ.
15 ದಿನಗಳ ಅಂತರದಲ್ಲಿ ನಿಧನರಾದ ಎರಡನೇ ಕೇಂದ್ರ ಸಚಿವ ಪಾಸ್ವಾನ್ ಆಗಿದ್ದಾರೆ. ಸೆ.23ರಂದಷ್ಟೇ ಕರ್ನಾಟಕ ಮೂಲಕ ರೈಲ್ವೈ ಸಚಿವ ಸುರೇಶ್ ಅಂಗಡಿಯವರು ಕೊರೋನಾದಿಂದ ವಿಧಿವಶರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


