ಕೇರಳದಲ್ಲಿ ದಾಖಲೆ ಬರೆದ ಕೊರೋನಾ: ಒಂದೇ ದಿನ 11,755 ಮಂದಿಗೆ ಸೋಂಕು, 23 ಸಾವು
ದೇಶದಲ್ಲಿ ಮೊಟ್ಟ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಸೋಂಕು ಹತೋಟಿಗೆ ಬಂದಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮಾರಕ ಕೊರೋನಾ ವೈರಸ್ ತನ್ನ ಆರ್ಭಟ ತೋರಿದ್ದು, ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ದಾಖಲೆಯ ಬರೊಬ್ಬರಿ 11,755 ಮಂದಿಗೆ ಸೋಂಕು ಒಕ್ಕರಿಸಿದೆ.

ಕೊಚ್ಚಿ: ದೇಶದಲ್ಲಿ ಮೊಟ್ಟ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಸೋಂಕು ಹತೋಟಿಗೆ ಬಂದಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮಾರಕ ಕೊರೋನಾ ವೈರಸ್ ತನ್ನ ಆರ್ಭಟ ತೋರಿದ್ದು, ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ದಾಖಲೆಯ ಬರೊಬ್ಬರಿ 11,755 ಮಂದಿಗೆ ಸೋಂಕು ಒಕ್ಕರಿಸಿದೆ.
ಈ ಬಗ್ಗೆ ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ 11,755 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,79,855ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,570 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ಸೋಂಕಿತರ ಪೈಕಿ 95,918 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,82,874 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ಇಂದು ಒಂದೇ ದಿನ 23 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೇರಳದಲ್ಲಿ ಈ ವರೆಗೂ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 978ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಪತ್ತೆಯಾದ 11,755 ಸೋಂಕಿತರ ಪೈಕಿ 10,471ಮಂದಿಯ ಸೋಂಕಿನ ಹಿನ್ನಲೆ ಪತ್ತೆಯಾಗಿದ್ದು, ಬಾಕಿ 952 ಮಂದಿಗೆ ಸೋಂಕು ತಗುಲಿತು ಎಂಬುದು ಪತ್ತೆಯಾಗಿಲ್ಲ. ಅಂತೆಯೇ ಇಂದು 116 ಮಂದಿ ಆರೋಗ್ಯ ಸಿಬ್ಬಂದಿಗೆ ಸೋಂಕು ಒಕ್ಕರಿಸಿದೆ. ಕೇರಳದಲ್ಲಿ ಇಂದು ಒಟ್ಟು 66,228 ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಸೋಂಕು ಪಾಸಿಟಿವ್ ಪ್ರಮಾಣ 17.74ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


