ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 73,272 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 69.79 ಲಕ್ಷ

ದೇಶದಲ್ಲಿ ಶನಿವಾರ 73,272 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 69,79,424ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 73,272 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 69.79 ಲಕ್ಷ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಶನಿವಾರ 73,272 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 69,79,424ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇದೇ ವೇಳೆ ಕಳೆದ 24 ಗಂಟೆಗಳಲ್ಲಿ 926 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,07,416ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಒಟ್ಟಾರೆ 69,79,424 ಮಂದಿ ಸೋಂಕಿತರ ಪೈಕಿ 59,88,823 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇನ್ನೂ ದೇಶದಲ್ಲಿ 8,83,185 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,64,018 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 11,64,018 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 11,64,018 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅ.9 ರವರೆಗೂ 8,57,98,698 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.