ದೇಶ

ಗೋವಾ: ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಒಬ್ಬ ಕಾರ್ಮಿಕ ಸಾವು, ನಾಲ್ವರು ಗಂಭೀರ

ಅಮೋನಿಯಂ ಅನಿಲ ಸೋರಿಕೆಯಾದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾದ ಕುಂಕೋಲಿಮ್ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ನಡೆದಿದೆ.

ಗೋವಾ: ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಒಬ್ಬ ಕಾರ್ಮಿಕ ಸಾವು, ನಾಲ್ವರು ಗಂಭೀರ
Published On :

ಪಣಜಿ: ಅಮೋನಿಯಂ ಅನಿಲ ಸೋರಿಕೆಯಾದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾದ ಕುಂಕೋಲಿಮ್ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ನಡೆದಿದೆ.

ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿರುವ ಸಮುದ್ರ ಆಹಾರ ಸಂಸ್ಕರಣಾ ಘಟಕದಲ್ಲಿ ಶುಕ್ರವಾರ ಮುಂಜಾನೆ  ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ

"ಘಟಕದ ಆವರಣದಲ್ಲಿ ಸೋರಿಕೆಯಾದ ಅಮೋನಿಯಂ ಅನಿಲವನ್ನು ಉಸಿರಾಡಿದ ನಂತರ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇತರ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ"

"ಕಾರ್ಮಿಕರು ನಿದ್ದೆ ಮಾಡುವಾಗ ಈ ಘಟನೆ ಸಂಭವಿಸಿದೆ" ಎಂದು ಅವರು ಹೇಳಿದರು. ಏತನ್ಮಧ್ಯೆ ಇಂಡಸ್ಟ್ರಿಯಲ್ ಎಸ್ಟೇಟ್ ಅನ್ನು ನಿರ್ವಹಿಸುವ ಗೋವಾ ಕೈಗಾರಿಕಾ ಅಭಿವೃದ್ಧಿ ನಿಗಮ (ಜಿಐಡಿಸಿ) ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದೆ.

ಜಿಐಡಿಸಿ ಅಧ್ಯಕ್ಷ ಗ್ಲೆನ್ ಟಿಕ್ಲೊ ಅವರು ಈ ಹಿಂದೆ ಕಾರ್ಖಾನೆಯ ನಿರ್ವಹಣೆ, ಸ್ಥಾವರ ಸ್ಥಿತಿಯ ಬಗ್ಗೆ ನೋಟಿಸ್ ನೀಡಿದ್ದರು, ಆದರೆ ಈ ಬಗ್ಗೆ ನಿರ್ಲಕ್ಷ ತಾಳಲಾಗಿತ್ತು, ಆದರೆ ಈ ಘಟನೆಯ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.