ಕಾಂಗ್ರೆಸ್ ಗೆ ನಟಿ ಖುಷ್ಬೂ ಗುಡ್ ಬೈ, ನಾಳೆ ಬಿಜೆಪಿ ಸೇರ್ಪಡೆ?
ಹಿರಿಯ ನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದ್ದು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚೆನ್ನೈ: ಹಿರಿಯ ನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದ್ದು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬೂ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಗೆ ವಿದಾಯ ಹೇಳಿದ್ದು, ನಾಳೆ ಬೆಳಿಗ್ಗೆ ಅವರು ಬಿಜೆಪಿಗೆ ಸೇರಲಿದ್ದಾರೆ. ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ನಾಳೆ ದೆಹಲಿಗೆ ತೆರಳಲಿರುವ ಖುಷ್ಬೂ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರೆ ಹಿರಿಯ ನಾಯಕರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಖುಷ್ಬೂ ಅವರೊಂದಿಗೆ ಐಆರ್ ಎಸ್ ಅಧಿಕಾರಿ, ಖ್ಯಾತ ಯೂಟ್ಯೂಬರ್ ಒಬ್ಬರು ಕೂಡ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
2014ರ ಸೆಪ್ಟೆಂಬರ್ ನಲ್ಲಿ ಡಿಎಂಕೆ ಪಕ್ಷ ತೊರೆದಿದ್ದ ಖುಷ್ಬೂ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ ಕಳೆದೊಂದು ತಿಂಗಳಿನಿಂದ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಊಹಾಪೋಹ ಎದ್ದಿದ್ದವು. ಕಳೆದವಾರ ಖುಷ್ಬೂ ಅವರು ಬಿಜೆಪಿ ಸೇರ್ಪಡೆ ವಿಚಾರವನ್ನು ತಳ್ಳಿ ಹಾಕಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿಲಿರುವ ಖುಷ್ಬೂ ಅವರು ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


