ದೇಶ

ಸಾಲು ಸಾಲು ಹಬ್ಬಗಳು, ಚಳಿಗಾಲದಲ್ಲಿ ಕೋವಿಡ್‌ ಪ್ರಕರಣಗಳ ಏರಿಕೆ: ಡಾ. ಹರ್ಷವರ್ಧನ್‌ ಎಚ್ಚರಿಕೆ

ದೇಶದಲ್ಲಿ ಕೋವಿಡ್‌ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌, ಚಳಿಗಾಲದ ಅವಧಿಯಲ್ಲಿ ಇದು ಇನ್ನೂ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ.

ಸಾಲು ಸಾಲು ಹಬ್ಬಗಳು, ಚಳಿಗಾಲದಲ್ಲಿ ಕೋವಿಡ್‌ ಪ್ರಕರಣಗಳ ಏರಿಕೆ: ಡಾ. ಹರ್ಷವರ್ಧನ್‌ ಎಚ್ಚರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌, ಚಳಿಗಾಲದ ಅವಧಿಯಲ್ಲಿ ಇದು ಇನ್ನೂ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ.

ವಾರದ ಸಾಮಾಜಿಕ ಜಾಲತಾಣಗಳ ಕಾರ್ಯಕ್ರಮ 'ಸಂವಾದ'ದಲ್ಲಿ ಪಾಲ್ಗೊಂಡ ಅವರು, ಕೊರೋನಾ ವೈರಸ್ ಶ್ವಾಸಕೋಶದ ವೈರಸ್ ಆಗಿದ್ದು, ತಂಪು ವಾತಾವರಣದಲ್ಲಿ ಉಸಿರಾಟದ ವೈರಸ್ ಹರಡುವುದು ಹೆಚ್ಚಾಗುತ್ತದೆ. ತಂಪು ಹವಾಮಾನ ಮತ್ತು ಕಡಿಮೆ ಆರ್ದ್ರತೆಯ ಸ್ಥಿತಿಯಲ್ಲಿ ಶ್ವಾಸಕೋಶದ ವೈರಸ್‌ಗಳು ಹೆಚ್ಚಾಗುತ್ತದೆ. 

ನೆನಪಿನಲ್ಲಿಟ್ಟುಕೊಳ್ಳಬೇಕಾದ ಇನ್ನೊಂದು ಸಂಗತಿಯೆಂದರೆ, ಚಳಿಗಾಲದ ಸಮಯದಲ್ಲಿ, ವಸತಿ ನಿವಾಸಗಳಲ್ಲಿ ಜನದಟ್ಟಣೆ ಹೆಚ್ಚಾಗುವ ಪ್ರವೃತ್ತಿ ಇದೆ. ಇದು ಸೋಂಕಿನ ಪ್ರಸರಣವನ್ನು ಹೆಚ್ಚಿಸಬಹುದು. ಆದ್ದರಿಂದ ಭಾರತದ ಚಳಿಗಾಲದ ಋತುವಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆಗಳನ್ನು ತಳ್ಳಿ ಹಾಕಲಾಗದು ಎಂದಿದ್ದಾರೆ.

ಇದೇ ವೇಳೆ, ಸಾಲು ಸಾಲು ಹಬ್ಬಗಳು ಸಹ ಬರುತ್ತಿದೆ. ಜನರು ಹೆಚ್ಚಾಗಿ ಒಂದೇ ಕಡೆ ಸೇರುವ ಸಾಧ್ಯತೆಗಳು ಹೆಚ್ಚಾಗಿದೆ. ಈ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಅನುಸರಿಸದೆ ಹೋದರೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.