ದೇಶ

ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳು 60 ಲಕ್ಷಕ್ಕೆ ಏರಿಕೆ! 

ಭಾರತದಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 70 ಲಕ್ಷ ದಾಟಿದ್ದರೂ ಕಳೆದ 24 ಗಂಟೆಗಳಲ್ಲಿ 89,154 ಜನರು ಚೇತರಿಸಿಕೊಂಡಿದ್ದು, ಒಟ್ಟಾರೆ ಚೇತರಿಕೆ ಕಂಡ ಕೊರೋನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳು 60 ಲಕ್ಷಕ್ಕೆ ಏರಿಕೆ! 
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 70 ಲಕ್ಷ ದಾಟಿದ್ದರೂ ಕಳೆದ 24 ಗಂಟೆಗಳಲ್ಲಿ 89,154 ಜನರು ಚೇತರಿಸಿಕೊಂಡಿದ್ದು, ಒಟ್ಟಾರೆ ಚೇತರಿಕೆ ಕಂಡ ಕೊರೋನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೆ ಏರಿಕೆಯಾಗಿದೆ. 

ಒಟ್ಟಾರೆ ಪ್ರಕರಣಗಳು ಏರಿಕೆಯಾಗುತ್ತಿರುವುದರ ನಡುವೆಯೂ 60 ಲಕ್ಷ ಜನರು ಚೇತರಿಸಿಕೊಂಡಿರುವುದು ಜಾಗತಿಕ ಮಟ್ಟದಲ್ಲಿ ಭಾರತ ಚೇತರಿಕೆ ಪ್ರಮಾಣವನ್ನು (ಶೇ.86.17) ಅತಿ ಹೆಚ್ಚು ಹೊಂದಿರುವ ದೇಶವಾಗಿದೆ. 

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಸತತ 8 ನೇ ದಿನ ಕೊರೋನಾದಿಂದ ಮೃತಪಟ್ಟಿರುವವರ ಸಂಖ್ಯೆ 1000 ಕ್ಕಿಂತಲೂ ಕಡಿಮೆ ಇದೆ ಹಾಗೂ ಸತತ ಮೂರನೇ ದಿನ ಸಕ್ರಿಯ ಕೊರೋನಾ ಪ್ರಕರಣಗಳು 9 ಲಕ್ಷಕ್ಕಿಂತಲೂ ಕಡಿಮೆ ಇದೆ. 

ಶೇ.61 ರಷ್ಟು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಟಾಪ್ 5 ರಾಜ್ಯಗಳೂ ಸಹ ಚೇತರಿಕೆ ಪ್ರಮಾಣದಲ್ಲಿ ಶೇ.54.3 ರಷ್ಟು ಕೊಡುಗೆ ನೀಡುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ ತಮಿಳುನಾಡು ಅತಿ ಹೆಚ್ಚು ಕೋವಿಡ್ ಪ್ರಕರಣಗಳಿರುವ ಟಾಪ್ 5 ರಾಜ್ಯಗಳಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.