ದೇಶ

ದೇಶದಲ್ಲಿ ಉತ್ತುಂಗದಿಂದ ಇಳಿಯುತ್ತಿರುವ ಕೊರೋನಾ; 24 ಗಂಟೆಗಳಲ್ಲಿ 74,383 ಕೇಸ್ ಪತ್ತೆ, 70 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಮತ್ತೊಮ್ಮೆ ದೈನಂದಿನ ಕೊರೋನಾ ವೈರಸ್ ಪ್ರಕರಣಗಳಿಗಿಂತಲೂ ಹೆಚ್ಚಿನ ಚೇತರಿಕೆ ಪ್ರಮಾಣ ದಾಖಲಾಗಿದೆ. ದೇಶದಲ್ಲಿ ಒಂದೇ ದಿನ 74,383 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 70,53,807ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ದೇಶದಲ್ಲಿ ಉತ್ತುಂಗದಿಂದ ಇಳಿಯುತ್ತಿರುವ ಕೊರೋನಾ; 24 ಗಂಟೆಗಳಲ್ಲಿ 74,383 ಕೇಸ್ ಪತ್ತೆ, 70 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ದೈನಂದಿನ ಕೊರೋನಾ ವೈರಸ್ ಪ್ರಕರಣಗಳಿಗಿಂತಲೂ ಹೆಚ್ಚಿನ ಚೇತರಿಕೆ ಪ್ರಮಾಣ ದಾಖಲಾಗಿದೆ. ದೇಶದಲ್ಲಿ ಒಂದೇ ದಿನ 74,383 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 70,53,807ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 918 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,08,334ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ಸಕ್ರಿಯ ಪ್ರಕರಣಗಳ ಸಂಖ್ಯೆ 3ನೇ ದಿವೂ 9 ಲಕ್ಷಕ್ಕಿಂತ ಕಡಿಮೆ ದಾಖಲಾಗಿದೆ. ದೇಶದ ಒಟ್ಟಾರೆ 70,53,807 ಸೋಂಕಿತರ ಪೈಕಿ 60,77,977 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 8,67,496 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,78,544 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 10,78,544 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 10,78,544 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅ.10 ರವರೆಗೂ 8,68,77,242 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.