ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರೆಂದು ಪರಿಗಣಿಸುತ್ತಿಲ್ಲ; ರಾಹುಲ್ ಗಾಂಧಿ
ಹಲವು ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರಂತೆ ಪರಿಗಣಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ನವದೆಹಲಿ: ಹಲವು ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರಂತೆ ಪರಿಗಣಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.
ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಿಡಿಕಾರಿರುವ ರಾಹುಲ್, "ಮುಖ್ಯಮಂತ್ರಿಗಳು ಮತ್ತು ಪೊಲೀಸರು, ಯಾರೂ ಅತ್ಯಾಚಾರಕ್ಕೊಳಗಾಗಿಲ್ಲ ಎಂಬ ಹೇಳಿಕೆ ನೀಡುತ್ತಿದ್ದಾರೆ. ಏಕೆಂದರೆ ಅವರಿಗೆ ಮತ್ತು ಅನೇಕ ಭಾರತೀಯರಿಗೆ ಆ ಯುವತಿ ಯಾರೂ ಆಗಿರಲಿಲ್ಲ' ಎಂದು ಟ್ವೀಟ್ ಮಾಡಿದ್ದಾರೆ.
"ನಾಚಿಕೆಗೇಡಿನ ವಿಷಯವೆಂದರೆ ದೇಶದಲ್ಲಿ ಹಲವು ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರೆಂದು ಪರಿಗಣಿಸುವುದಿಲ್ಲ" ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


