ದೇಶ

ಬಿಹಾರ ವಿಧಾನಸಭಾ ಚುನಾವಣೆ: 50 ಸ್ಥಾನಗಳಲ್ಲಿ ಶಿವಸೇನಾ ಸ್ಪರ್ಧೆ

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 50 ಸ್ಥಾನಗಳಲ್ಲಿ ಶಿವಸೇನಾ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಅನಿಲ್ ದೇಸಾಯಿ ಭಾನುವಾರ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ: 50 ಸ್ಥಾನಗಳಲ್ಲಿ ಶಿವಸೇನಾ ಸ್ಪರ್ಧೆ
ಉದ್ಧವ್ ಠಾಕ್ರೆ
Published On :

ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 50 ಸ್ಥಾನಗಳಲ್ಲಿ ಶಿವಸೇನಾ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಅನಿಲ್ ದೇಸಾಯಿ ಭಾನುವಾರ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನಾ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ. ಅಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸಾರ್ವಜನಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದಾಗಿ ತಿಳಿಸಿದರು.

ಸ್ವತಂತ್ರವಾಗಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದ್ದು, ಕಹಳೆ ಪಕ್ಷದ ಸಂಕೇತವಾಗಿರುತ್ತದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಹಾರದಲ್ಲಿ ಚುನಾವಣಾ ಪ್ರಚಾರದ ಬಗ್ಗೆ ಪಕ್ಷ ಮಾಹಿತಿ ನೀಡಲಿದೆ ಎಂದರು.

ಬಿಹಾರದಲ್ಲಿ ಪ್ರಚಾರ ನಡೆಸಲಿರುವ 22 ನಾಯಕರ ಪಟ್ಟಿಯನ್ನು ಶಿವಸೇನಾ ಗುರುವಾರ ಬಿಡುಗಡೆ ಮಾಡಿತ್ತು.ಉದ್ಧವ್ ಠಾಕ್ರೆ , ಅವರ ಮಗ ಆದಿತ್ಯ ಠಾಕ್ರೆ  ಕೂಡಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.    

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.