ಶ್ರೀನಗರದಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಸೋಮವಾರ ಬೆಳಿಗ್ಗೆ ಅಪ್‌ಟೌನ್ ಶ್ರೀನಗರದ ಬಾರ್ಜುಲ್ಲಾದಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಆದರೆ, ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ ಅಡಗಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಪರಸ್ಪರ ಗುಂಡಿನಚಕಮಕಿ ನಡೆದಿದೆ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


