ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 66,732 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 71 ಲಕ್ಷ

ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 66,732 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 71 ಲಕ್ಷ ಗಡಿದಾಟಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 66,732 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 71 ಲಕ್ಷ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 66,732 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 71 ಲಕ್ಷ ಗಡಿದಾಟಿದೆ. 

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 71,20,539ಕ್ಕೆ ತಲುಪಿದ್ದು, 71 ಲಕ್ಷ ಸೋಂಕಿತರ ಪೈಕಿ 61,49,536 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ಭಾರತದಲ್ಲಿ 8,61,853 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ಕಳೆದ 24 ಗಂಟೆಗಳಲ್ಲಿ 816 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,09,150ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,94,851 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 8,78,72,093 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.