ಸದ್ಯದ ಪರಿಸ್ಥಿತಿಯಲ್ಲಿ ಶಾಲೆ ಪುನರಾರಂಭ ಸಾಧ್ಯವಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್
ಸಾಮಾನ್ಯ ಶಿಕ್ಷಣ ತರಗತಿ ಆಧಾರಿತ ಶಿಕ್ಷಣಕ್ಕೆ ಆನ್‌ಲೈನ್ ಶಿಕ್ಷಣ ಎಂದಿಗೂ ಪರ್ಯಾಯವಾಗದಿದ್ದರೂ, ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೇಳಿದ್ದಾರೆ.

ತಿರುವನಂತಪುರಂ: ಸಾಮಾನ್ಯ ಶಿಕ್ಷಣ ತರಗತಿ ಆಧಾರಿತ ಶಿಕ್ಷಣಕ್ಕೆ ಆನ್‌ಲೈನ್ ಶಿಕ್ಷಣ ಎಂದಿಗೂ ಪರ್ಯಾಯವಾಗದಿದ್ದರೂ, ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೇಳಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬಂದ ನಂತರ ಯಾವುದೇ ವಿಳಂಬವಿಲ್ಲದೆ ಶಾಲೆಗಳನ್ನು ಪುನರಾರಂಭಿಸಲಾಗುವುದು. ಆದರೆ ಈಗ ಶಾಲೆ ಆರಂಭಿಸಲು ಸಾಧ್ಯವಿಲ್ಲ. ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ನಾವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕೇರಳ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಡಿಜಿಟಲ್ ಆಗಿ ಮಾರ್ಪಡಿಸಿದ ಮೊದಲ ರಾಜ್ಯವೆಂದು ಅಧಿಕೃತವಾಗಿ ಘೋಷಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನ್ ಅವರು, ಸದ್ಯ ಶಾಲೆ ಆರಂಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


