ಕೋವಿಡ್-19: ಆಂಧ್ರ ಪ್ರದೇಶದಲ್ಲಿ ಇಂದು 4,622 ಹೊಸ ಸೋಂಕು ಪ್ರಕರಣಗಳು ಪತ್ತೆ!
ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 4,622 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಅಮರಾವತಿ: ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 4,622 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಈ ಬಗ್ಗೆ ಆಂಧ್ರ ಪ್ರದೇಶ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಆಂಧ್ರ ಪ್ರದೇಶದಲ್ಲಿ 4,622 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ಆ ರಾಜ್ಯದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 7,63,573ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಆಂಧ್ರ ಪ್ರದೇಶದಲ್ಲಿ 5,715 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 7,14,427ಕ್ಕೆ ಏರಿಕೆಯಾಗಿದೆ.
ಇನ್ನು ಕೊರೋನಾ ಸೋಂಕಿನಿಂದಾಗಿ ಆಂಧ್ರ ಪ್ರದೇಶದಲ್ಲಿ ಈ ವರೆಗೂ 6,291 ಮಂದಿ ಸಾವನ್ನಪ್ಪಿದ್ದು, ಆಂಧ್ರ ಪ್ರದೇಶದಲ್ಲಿ ಪ್ರಸ್ತುತ 42,855 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.
ಅಂಧ್ರ ಪ್ರದೇಶದಲ್ಲಿ ಇಂದು ಒಟ್ಟು 72,082 ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 32, 926 ಆರ್ ಟಿಪಿಸಿಆರ್ ಪರೀಕ್ಷೆಗಳು ಮತ್ತು 39, 156 ಆ್ಯಂಟಿ ಜೆನ್ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


