ಕೋವಿಡ್ ಲಸಿಕೆ ವಿತರಣಾ ಯೋಜನೆಗೆ ತಜ್ಞರ ಗುಂಪಿನಿಂದ ಕಾರ್ಯತಂತ್ರ: ಡಾ. ಹರ್ಷವರ್ಧನ್
ಮುಂದಿನ ವರ್ಷದ ಆರಂಭದಲ್ಲಿ ಹಲವಾರು ಮೂಲಗಳಿಂದ ಕೋವಿಡ್-19 ಲಸಿಕೆ ಭಾರತಕ್ಕೆ ಬರುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ಹಲವಾರು ಮೂಲಗಳಿಂದ ಕೋವಿಡ್-19 ಲಸಿಕೆ ಭಾರತಕ್ಕೆ ಬರುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.
ಮಂಗಳವಾರ ನಡೆದ ಸಚಿವರ ಸಭೆಯಲ್ಲಿ ಮಾತನಾಡಿದ ಸಚಿವರು, ದೇಶದಲ್ಲಿ ಲಸಿಕೆಯನ್ನು ಯಾವ ರೀತಿಯಲ್ಲಿ ವಿತರಿಸಬೇಕು ಎಂಬುದರ ಬಗ್ಗೆ ತಜ್ಞರ ಗುಂಪು ಕಾರ್ಯತಂತ್ರವನ್ನು ರೂಪಿಸುತ್ತಿರುವುದಾಗಿ ಹೇಳಿದರು.
ಲಸಿಕೆಗಳು ಸಿದ್ಧವಾದ ನಂತರ ನ್ಯಾಯಯುತ ಮತ್ತು ಸಮಾನ ರೀತಿಯಲ್ಲಿ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹರ್ಷ ವರ್ಧನ್ ಈ ಹಿಂದೆ ಹೇಳಿದ್ದರು.ದೇಶದ ಪ್ರತಿಯೊಬ್ಬರಿಗೂ ಲಸಿಕೆ ನೀಡುವುದು ಹೇಗೆ ಎಂಬುದು ನಮ್ಮ ಅತ್ಯಂತ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಆದ್ಯತೆಯ ನಾಗರಿಕ ಗುಂಪುಗಳನ್ನು ಗುರುತಿಸಲು ಗಣನೆಗೆ ತೆಗೆದುಕೊಳ್ಳಬೇಕಾದ ಪ್ರಮುಖ ಅಂಶಗಳ ಬಗ್ಗೆಯೂ ಇತ್ತೀಚಿಗೆ ಕೇಂದ್ರ ಸಚಿವರು ಮಾಹಿತಿ ನೀಡಿದ್ದರು.ಸೋಂಕಿನ ಅಪಾಯದಲ್ಲಿರುವ ವೃತ್ತಿಪರರು, ಗಂಭೀರ ಸ್ಥಿತಿಯಲ್ಲಿರುವವರು ಮತ್ತು ಹೆಚ್ಚಿನ ಮರಣ ಪ್ರಮಾಣದ ಅಂಶಗಳನ್ನು ಪರಿಗಣಿಸಿ ಆದ್ಯತೆಯ ಗುಂಪುಗಳಿಗೆ ಲಸಿಕೆಯನ್ನು ವಿತರಿಸಲಾಗುವುದು ಎಂದು ಡಾ. ಹರ್ಷವರ್ಧನ್ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


