ತಮಿಳುನಾಡು ಸಿಎಂ ಪಳನಿಸ್ವಾಮಿಗೆ ಮಾತೃವಿಯೋಗ
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ತಾಯಿ ಥಾವುಸಾಯಮ್ಮಾಳ್ ವಿಧಿವಶರಾಗಿದ್ದಾರೆ.

ಸೇಲಂ: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ತಾಯಿ ಥಾವುಸಾಯಮ್ಮಾಳ್ ವಿಧಿವಶರಾಗಿದ್ದಾರೆ.
93 ವರ್ಷದ ಥಾವುಸಾಯಾಮ್ಮಾಳ್ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಶುಕ್ರವಾರ ಅವರನ್ನು ಸೇಲಂ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸೋಮವಾರ ರಾತ್ರಿ 12.30 ರ ಸುಮಾರಿಗೆ ಥಾವುಸಾಯಮ್ಮಾಳ್ ಕೊನೆಯುಸಿರೆಳೆದಿದ್ದು, ಸೇಲಂ ಜಿಲ್ಲೆಯ ಎಡಪ್ಪಾಡಿ ಬಳಿಯ ಸ್ವಗ್ರಾಮ ಸಿಲುವಂಪಾಳ್ಯಂ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ತೂತುಕುಡಿಯಲ್ಲಿ ಆಯೋಜಿಸಿದ್ದ ಎಲ್ಲಾ ಕಾರ್ಯಕ್ರಮ ಮತ್ತು ಸಭೆಗಳನ್ನು ಸಿಎಂ ಪಳನಿಸ್ವಾಮಿ ರದ್ದುಪಡಿಸಿದ್ದಾರೆ, ಸಿಎಂ ಪಳನಿಸ್ವಾಮಿ ತಾಯಿ ಅವರ ನಿಧನಕ್ಕೆ ತಮಿಳುನಾಡಿನ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


