ದೇಶ

ಹೈದರಾಬಾದ್ ನಲ್ಲಿ ಎರಡು ದಿನಗಳಿಂದ ಸತತ ಮಳೆ: ಹಲವು ಪ್ರದೇಶಗಳು ಜಲಾವೃತ; 11 ಜನ ಸಾವು

ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಸತತ ಅವ್ಯಾಹತ ಮಳೆಗೆ ಇದುವರೆಗೆ ಕನಿಷ್ಟ 11 ಮಂದಿ ಮೃತಪಟ್ಟಿದ್ದಾರೆ. ರಸ್ತೆಗಳಲ್ಲಿ ನೀರು ನುಗ್ಗಿ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಹೈದರಾಬಾದ್ ನಲ್ಲಿ ಎರಡು ದಿನಗಳಿಂದ ಸತತ ಮಳೆ: ಹಲವು ಪ್ರದೇಶಗಳು ಜಲಾವೃತ; 11 ಜನ ಸಾವು
ಹೈದರಾಬಾದ್ ನಲ್ಲಿ ಭಾರೀ ಮಳೆ
Published On :

ಹೈದರಾಬಾದ್: ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಸತತ ಅವ್ಯಾಹತ ಮಳೆಗೆ ಇದುವರೆಗೆ ಕನಿಷ್ಟ 11 ಮಂದಿ ಮೃತಪಟ್ಟಿದ್ದಾರೆ. ರಸ್ತೆಗಳಲ್ಲಿ ನೀರು ನುಗ್ಗಿ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಭಾರೀ ಮಳೆಗೆ ಹೈದರಾಬಾದ್ ನ ಬಂದ್ಲಗುಡ ಪ್ರದೇಶದಲ್ಲಿ ಮಗು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಸತತ ಮಳೆಗೆ ಬಂಡೆಯೊಂದು ನೀರಿನಲ್ಲಿ ಕೊಚ್ಚಿ ಬಂದು ಮನೆಗೆ ಬಿದ್ದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಹೈದರಾಬಾದ್ ನ ಶಂಶಾಬಾದ್ ಪ್ರದೇಶದ ಗಗನ್ ಪಹಾದ್ ಎಂಬಲ್ಲಿ  ಕಳೆದ ರಾತ್ರಿ ಸತತ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿದ್ದಾರೆ.

ಬಂಡ್ಲಗುಡದಲ್ಲಿ ಬಂಡೆ ಮನೆಯ ಮೇಲೆ ಬಿದ್ದು 8 ಮಂದಿ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದಕ್ಷಿಣ ವಲಯ ಡಿಸಿಪಿ ಗಜರಾವ್ ಭೂಪಾಲ್ ತಿಳಿಸಿದ್ದಾರೆ.

ಈ ಮಧ್ಯೆ ಹೈದರಾಬಾದ್ ಸಂಸದ ಅಸದುದ್ದೀನ್ ಒವೈಸಿ ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಮೊಹಮ್ಮಡಿಯಾ ಬೆಟ್ಟ, ಬಂಡ್ಲಗುಡದಲ್ಲಿ ಬಂಡೆ ಕುಸಿದು 9 ಮಂದಿ ಮೃತಪಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಮನೆಗಳೊಳಗೆ ನೀರು ನುಗ್ಗಿರುವುದರಿಂದ ಕೊಚ್ಚೆ ನೀರನ್ನು ಹೊರಹಾಕಲು ಹಿಮಯತ್ಸಾಗರ ಜಲಾಶಯದ ಎರಡು ಗೇಟ್ ಗಳನ್ನು ಬಿಡಲಾಗಿದ್ದು ಅಲ್ಲಿಂದ ಮುಸಿ ನದಿಗೆ 1,300 ಕ್ಯೂಸೆಕ್ಸ್ ನೀರು ಹೊರಹಾಕಲಾಗುತ್ತಿದೆ.

ನೀರಿನ ಒಳಹರಿವು ಹೆಚ್ಚಾಗುತ್ತಿದ್ದಂತೆ ಇಂದು ಜಲಾಶಯದ ಮತ್ತಷ್ಟು ಗೇಟ್ ಗಳನ್ನು ಬಿಡುವ ಸಾಧ್ಯತೆಯಿದೆ. 2010ರಲ್ಲಿ ಇಲ್ಲಿ ಪ್ರವಾಹ ಬಂದು ಇದೇ ರೀತಿ ಗೇಟ್ ಗಳನ್ನು ಬಿಡಲಾಗಿತ್ತು. ಹಿಮಯತ್ಸಾಗರದಲ್ಲಿ ಒಟ್ಟು 17 ಗೇಟ್ ಗಳಿವೆ.

ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಇಂದು ಹೈದರಾಬಾದ್ ನಲ್ಲಿ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆಯಿದೆ. ತೆಲಂಗಾಣದಾದ್ಯಂತ ನಿನ್ನೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು, ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

<

ಮಳೆನೀರು ಹಸ್ಸನ್ ನಗರ್, ತಲ್ಲಬ್ ಕಟ್ಟ, ಒಸ್ಮನ್ ನಗರ್, ತೀಗಲ್ಕುಂಟ ಪ್ರದೇಶಗಳಲ್ಲಿ ಹಲವು ಮನೆಗಳಿಗೆ ನುಗ್ಗಿದೆ. ಮೀರತ್ ಪೆಟ್, ಬಲಪುರ್, ಅಸಿಫ್ ನಗರ ಮತ್ತು ಟೊಲಿಚೊವ್ಕಿ ಪ್ರದೇಶಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.