ಮಹಾರಾಷ್ಟ್ರ, ಕರ್ನಾಟಕದ ಕಲಬುರಗಿಯಲ್ಲಿ ಪ್ರವಾಹ ಪರಿಸ್ಥಿತಿ: ಎನ್ ಡಿಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯ
ದೇಶದ ಅಲ್ಲಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.

ಮುಂಬೈ/ಬೆಂಗಳೂರು: ದೇಶದ ಅಲ್ಲಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಎರಡೂ ರಾಜ್ಯಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಸುರಕ್ಷತೆಗೆ ರಾಷ್ಟ್ರೀಯ ವಿಪತ್ತು ಪರಿಹಾರ ತಂಡ(ಎನ್ ಡಿಆರ್ ಎಫ್) ಇಳಿದಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಕಲಬುರಗಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ನಿನ್ನೆ ಎರಡು ಎನ್ ಡಿಆರ್ ಎಫ್ ತಂಡವನ್ನು ಕರ್ನಾಟಕಕ್ಕೆ ಮತ್ತು ಮೂರು ತಂಡಗಳನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗಿದೆ. ಮಹಾರಾಷ್ಟ್ರದ ಲಾತುರ್ ಮತ್ತು ಸೋಲಾಪುರದಲ್ಲಿ ಎರಡು ತಂಡಗಳನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ.
ಪುಣೆಯ ಬಾರಾಮತಿಯ ಜನರನ್ನು ಸ್ಥಳಾಂತರ ಮಾಡಿ ಸುರಕ್ಷಿತ ಪ್ರದೇಶಕ್ಕೆ ಕಳುಹಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಕರ್ನಾಟಕದ ಗುಲ್ಬರ್ಗ ಜಿಲ್ಲೆಯ ಸೊನ್ನ ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಾಗಿದೆ. ಅಣೆಕಟ್ಟಿನಿಂದ 2 ಲಕ್ಷ ಕ್ಯೂಸೆಕ್ಸ್ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಬಿಡಲಾಗಿದೆ.
ಇಂದು ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


