ದೇಶ

ಕೋವಿಡ್-19: ಭಾರತದಲ್ಲಿಂದು 63,371 ಕೇಸ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 73 ಲಕ್ಷ

ಭಾರತದಲ್ಲಿ ಶುಕ್ರವಾರ 63,371 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 73,70,469ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 63,371 ಕೇಸ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 73 ಲಕ್ಷ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಶುಕ್ರವಾರ 63,371 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 73,70,469ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 895 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,12,161ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ.

73,70,469 ಒಟ್ಟಾರೆ ಸೋಂಕಿತರ ಪೈಕಿ 64,53,780 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,04,528 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,28,622 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,22,54,927 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.