ಮತ್ತೆ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 11,447 ಹೊಸ ಪ್ರಕರಣಗಳು ಪತ್ತೆ
ಕೊರೋನಾ ವೈರಸ್ ನ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಮತ್ತೆ ಸೋಂಕು ಅಬ್ಬರಿಸಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,447 ಸೋಂಕಿತರು ಪತ್ತೆಯಾಗಿದ್ದಾರೆ.

ಮುಂಬೈ: ಕೊರೋನಾ ವೈರಸ್ ನ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಮತ್ತೆ ಸೋಂಕು ಅಬ್ಬರಿಸಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,447 ಸೋಂಕಿತರು ಪತ್ತೆಯಾಗಿದ್ದಾರೆ.
ಹೌದು.. ಮಹಾರಾಷ್ಟ್ರದಲ್ಲಿ ಇಂದು ಒಟ್ಟು 11,447 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 15,76,062ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 13,885 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 13,44,368ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 1,89,715 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರದಲ್ಲಿ ಇಂದು 306 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಈ ವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 41,502ಕ್ಕೆ ಏರಿಕೆಯಾಗಿದೆ.
ಮುಂಬೈನಲ್ಲಿ 1,823 ಹೊಸ ಸೋಂಕು ಪ್ರಕರಣಗಳು ಪತ್ತೆ
ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಇಂದು 1,823 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,38,548ಕ್ಕೆ ಏರಿಕೆಯಾಗಿದೆ. ಇಂದು ಮುಂಬೈನಲ್ಲಿ 1,644 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮುಂಬೈನಲ್ಲಿ ಗುಣಮುಖರಾದವರ ಸಂಖ್ಯೆ 2,05,111ಕ್ಕೆ ಏರಿಕೆಯಾಗಿದೆ. ಇಂದು ಮುಂಬೈನಲ್ಲಿ 37 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಮುಂಬೈನಲ್ಲಿ ಬಲಿಯಾದವರ ಸಂಖ್ಯೆ 9,635 ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರಸ್ತುತ 19,608 ಸಕ್ರಿಯ ಪ್ರಕರಣಗಳಿವೆ ಎಂದು ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


