ದೇಶ

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ವ್ಯಾನ್-ಬಸ್ ಡಿಕ್ಕಿ, 9 ಸಾವು, 30 ಮಂದಿಗೆ ಗಾಯ

ಉತ್ತರ ಪ್ರದೇಶದ ಪುರಾನ್ಪುರ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವ್ಯಾನ್ ಹಾಗೂ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ವ್ಯಾನ್-ಬಸ್ ಡಿಕ್ಕಿ, 9 ಸಾವು, 30 ಮಂದಿಗೆ ಗಾಯ
ಗಾಯಾಳುಗಳನ್ನು ರಕ್ಷಣೆ ಮಾಡುತ್ತಿರುವುದು
Published On :

ಪಿಲಿಭಿತ್: ಉತ್ತರ ಪ್ರದೇಶದ ಪುರಾನ್ಪುರ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವ್ಯಾನ್ ಹಾಗೂ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ಲಖನೌನಿಂದ ಪಿಲಿಭಿತ್'ಗೆ ಬಸ್ ಬರುತ್ತಿತ್ತು. ಪುರಾನ್ಪುರ್ ಗಡಿ ಪ್ರದೇಶದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಇದ್ದಕ್ಕಿದ್ದಂತೆಯ ಉರುಳಿಬಿದ್ದಿದ್ದು, ಪರಿಣಾಮ ಸ್ಥಳದಲ್ಲಿಯೇ 9 ಮಂದಿ ದುರ್ಮರಣವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ರೂ ಪರಿಹಾರ ಘೋಷಣೆ
ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬ ಕುರಿತು ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.