ದೇಶ

ಇಂದಿನಿಂದ ನವರಾತ್ರಿ ಆರಂಭ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

ನವರಾತ್ರಿ ಸಂಭ್ರಮ ಶನಿವಾರದಿಂದ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿದ್ದಾರೆ.

ಇಂದಿನಿಂದ ನವರಾತ್ರಿ ಆರಂಭ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ
ಪ್ರಧಾನಿ ಮೋದಿ
Published On :

ನವದೆಹಲಿ: ನವರಾತ್ರಿ ಸಂಭ್ರಮ ಶನಿವಾರದಿಂದ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿದ್ದಾರೆ. 

ದುರ್ಗಾ ಮಾತೆಯ ವಿವಿಧ ಅವತಾರಗಳನ್ನು ಶ್ರದ್ಧಾ, ಭಕ್ತಿಯಿಂದ ಪೂಜಿಸಲಾಗುವ ನವರಾತ್ರಿ ಇಂದಿನಿಂದ ಆರಂಭಗೊಂಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿಯವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಾಂಬಾ, ನಿಮ್ಮೆಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ನೀಡಲಿ. ಜೈ ಮಾತಾ ಕೀ! ಎಂದು ಹೇಳಿದ್ದಾರೆ. 

ಮತ್ತೊಂದು ಟ್ವೀಟ್ ನಲ್ಲಿ ನವರಾತ್ರಿಯ ಮೊದನ ದಿನ ನಾವು ಶೈಲಪುತ್ರಿಯನ್ನು ಆರಂಧನೆ ಮಾಡುತ್ತೇವೆ ಎಂದಿರುವ ಅವರು, ಶೈಲಪುತ್ರಿಗೆ ಸಂಬಂಧಿಸಿದ ಸ್ತುತಿಯೊಂದನ್ನು ಹಂಚಿಕೊಂಡಿದ್ದಾರೆ. 

ನವರಾತ್ರಿಯ ಮೊದಲ ದಿನ ಶೈಲಪುತ್ರಿಗೆ ಸಂಬಂಧಿಸಿದ್ದಾಗಿದ್ದು, ಮಾ ಶೈಲಪುತ್ರಿಗೆ ಪ್ರಣಾಮಗಳು. ತಾಯಿಯ ಆಶೀರ್ವಾದದಿಂದ, ನಮ್ಮ ಗ್ರಹವು ಸುರಕ್ಷಿತವಾಗಿ, ಆರೋಗ್ಯಕರವಾಗಿ ಮತ್ತು ಸಮೃದ್ಧವಾಗಿರಲಿ. ಶೈಲಪುತ್ರಿಯ ಆಶೀರ್ವಾದವು ಬಡ ಮತ್ತು ದೀನ ದಲಿತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ನಮಗೆ ಶಕ್ತಿಯನ್ನು ನೀಡಲಿ ಎಂದು ತಿಳಿಸಿದ್ದಾರೆ. 

ನವರಾತ್ರಿ ಉತ್ಸವ 9 ದಿನಗಳ ಕಾಲ ನಡೆಯಲಿದ್ದು, ದುರ್ಗೆಯ 9 ಅವತಾರಗಳನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.