ಪಂಜಾಬ್ ನಲ್ಲಿ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಅಂತ್ಯಕ್ರಿಯೆ
ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ, ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಸಂಧು ಅವರ ಅಂತ್ಯಕ್ರಿಯೆ ನೆರವೇರಿದೆ.

ಪಂಜಾಬ್: ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ, ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಸಂಧು ಅವರ ಅಂತ್ಯಕ್ರಿಯೆ ನೆರವೇರಿದೆ.
ಸಾವಿರಾರು ಜನರು ಬಲ್ವಿಂದರ್ ಸಿಂಗ್ ಅವರ ಅಂತ್ಯಕ್ರಿಯೆ ವೇಳೆ ನೆರೆದಿದ್ದರು.
ಬಲ್ವಿಂದರ್ ಸಿಂಗ್ (62 ವರ್ಷ) ಅವರನ್ನು ಅಪರಿಚಿತ ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪಂಜಾಬ್ ಸಿಂಗ್ ಬಲ್ವಿಂದರ್ ಸಿಂಗ್ ಅವರಿಗೆ ನೀಡಿದ್ದ ಭದ್ರತೆ ಹಿಂಪಡೆದ ಕೆಲವೇ ತಿಂಗಳಲ್ಲಿ ಹತ್ಯೆ ನಡೆದಿದ್ದು, ಹಂತಕರನ್ನು ಬಂಧಿಸುವವರೆಗೆ ನಾವು ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಕುಟುಂಬ ಪಟ್ಟು ಹಿಡಿದಿತ್ತು. ಆದರೆ ಜಿಲ್ಲಾಡಳಿತ ಮನವೊಲಿಕೆ ಮಾಡಿದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಕ್ಷೇತ್ರದ ಶಾಸಕ ಸುಖ್ ಪಾಲ್ ಸಿಂಗ್ ಭುಲ್ಲರ್ ಸಹ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿದರು. ಘಟನೆ ಬೆನ್ನಲ್ಲೇ ಪೊಲೀಸ್ ಇಲಾಖೆ ಬಲ್ವಿಂದರ್ ಸಿಂಗ್ ಕುಟುಂಬಕ್ಕೆ ಭದ್ರತೆ ನೀಡಲಾಗಿದ್ದು, ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವ ಬಗ್ಗೆ ಜಿಲ್ಲಾಡಳಿತ ಭರವಸೆಯನ್ನೂ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


