ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣವನ್ನು ಒಪ್ಪಿಕೊಂಡ ಕೇಂದ್ರ ಸರ್ಕಾರ
ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.

ನವದೆಹಲಿ: ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.ಆದಾಗ್ಯೂ, ಪ್ರಸ್ತುತ ಕೆಲವೊಂದು ರಾಜ್ಯ ಮತ್ತು ಜಿಲ್ಲೆಗಳಿಗೆ ಮಾತ್ರ ಇದು ಸಿಮೀತವಾಗಿರುವುದಾಗಿ ಅವರು ತಿಳಿಸಿದ್ದಾರೆ.
ವಾರದ ವೆಬಿನಾರ್' ಸಂಡೇ ಸಂವಾದ'ದಲ್ಲಿ ಸಾಮಾಜಿಕ ಮಾಧ್ಯಮಗಳ ಪ್ರೇಕ್ಷಕರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದಾಗಿ ಒಪ್ಪಿಕೊಂಡರು.
ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಶೇಷವಾಗಿ ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಕೋವಿಡ್-19 ಸಮುದಾಯ ಹಂತ ತಲುಪಿರುವ ನಿರೀಕ್ಷೆಯಿದೆ. ಆದಾಗ್ಯೂ, ದೇಶಾದ್ಯಂತ ಇದು ತಲುಪಿಲ್ಲ. ಕೆಲವೇ ಜಿಲ್ಲೆಗಳಿಗೆ ಮಾತ್ರ ಇದು ಸೀಮಿತವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


