ದೇಶ

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 61,871 ಕೇಸ್ ಪತ್ತೆ, 7 ಲಕ್ಷಕ್ಕಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ದೇಶದಲ್ಲಿ ಒಂದೇ ದಿನ 61,871 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 61,871 ಕೇಸ್ ಪತ್ತೆ, 7 ಲಕ್ಷಕ್ಕಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಒಂದೇ ದಿನ 61,871 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 1033 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,14,031ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

ಒಟ್ಟು 74,94,552ಕ್ಕೆ ಮಂದಿ ಸೋಂಕಿತರ ಪೈಕಿ ಈ ವರೆಗೂ 65,97,210 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಭಾರತದಲ್ಲಿನ್ನೂ 7,83,311 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,70,173 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,42,24,190 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.