ಭದ್ರತಾ ಪಡೆಗಳಿಂದ ಅರುಣಾಚಲದಲ್ಲಿ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರ ಹತ್ಯೆ
ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ರಕ್ಷಣಾ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ಇಟಾನಗರ: ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ರಕ್ಷಣಾ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಸಾಮಾನ್ಯ ಪ್ರದೇಶವಾದ ವಕ್ಕಾದಲ್ಲಿ ಶನಿವಾರ ಪೊಲೀಸರೊಂದಿಗೆ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿವೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ತೇಜ್ಪುರ ಮೂಲದ ರಕ್ಷಣಾ ಸಾರ್ವಜನಿಕ ಸಂಪರ್ಕಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಷ್ ವರ್ಧನ್ ಪಾಂಡೆ ಹೇಳಿದರು.
ಭದ್ರತಾ ಪಡೆಗಳು ಘಟನಾ ಸ್ಥಳದಿಂದ ಲತೋಡ್ ಬಂಧೂಕು ಮತ್ತು ಮೂರು ಜೀವಂತ ಗುಂಡುಗಳು, ಒಂದು .32 ಪಿಸ್ತೂಲ್ ಮತ್ತು ಒಂದು ಸುತ್ತಿನ ಚೈನಾ ನಿರ್ಮಿತ ಕೈ ಗ್ರೆನೇಡ್ ವಶಪಡಿಸಿಕೊಂಡಿದ್ದು, ಇವನ್ನು ಲಾಂಗ್ಡಿಂಗ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


