ದೇಶ

ಲಡಾಖ್‌ ಗಡಿಯಲ್ಲಿ ಭಾರತೀಯ ಸೇನೆಯಿಂದ ಚೀನಾ ಯೋಧನ ಬಂಧನ!

ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.

ಲಡಾಖ್‌ ಗಡಿಯಲ್ಲಿ ಭಾರತೀಯ ಸೇನೆಯಿಂದ ಚೀನಾ ಯೋಧನ ಬಂಧನ!
Published On :

ಲಡಾಖ್: ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ. 

ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕ ಅಜಾಗರೂಕತೆಯಿಂದ ಭಾರತೀಯ ಭೂಪ್ರದೇಶವನ್ನು ಪ್ರವೇಶಿಸಿರಬಹುದು ಎನ್ನಲಾಗಿದ್ದು ವಶಕ್ಕೆ ಪಡೆದ ಸೈನಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ತನಿಖೆ ಮುಗಿದ ನಂತರ ಪ್ರೋಟೋಕಾಲ್ ಪ್ರಕಾರ ಅವನನ್ನು ಚೀನಾಗೆ ವಾಪಾಸ್ ಕಳಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಲಡಾಖ್ ನಲ್ಲಿ  ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ ಈ ಬೆಳವಣಿಗೆ ನಡೆದಿರುವ ಕಾರಣ ತನಿಖಾ ಸಂಸ್ಥೆಗಳು ಗೂಢಚರ್ಯೆ ದೃಷ್ಟಿಕೋನದಿಂದ ತನಿಖೆ ಕೈಗೊಂಡಿವೆ. ಚೀನಾ ಸೇನೆ ಈ ಭಾಗದ ಭಾರತೀಯ ಸೈನ್ಯದ ತಾಣಗಳ ಮೇಲೆ ಬೇಹುಗಾರಿಕೆ ನಡೆಸಿರಬಹುದೆಂದು ಶಂಕಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.