ದೇಶ

ಮಹಾರಾಷ್ಟ್ರ: ಗಡ್ಚಿರೊಲಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಐವರು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ: ಗಡ್ಚಿರೊಲಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಐವರು ನಕ್ಸಲರ ಹತ್ಯೆ
ಸಾಂದರ್ಭಿಕ ಚಿತ್ರ
Published On :

ನಾಗ್ಪುರ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

ನಿನ್ನೆ ಅಪರಾಹ್ನ 4 ಗಂಟೆ ಹೊತ್ತಿಗೆ ಕೊಸ್ಮಿ-ಕಿಸ್ನೆಲಿ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ಗಡ್ಚಿರೊಲಿ ಎಸ್ಪಿ ತಿಳಿಸಿದ್ದಾರೆ.

ಗಡ್ಚಿರೊಲಿ ಪೊಲೀಸರ ಸಿ-60 ಕಮಾಂಡೊಗಳು ನಿನ್ನೆ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ನಕ್ಸಲರು ಗುಂಡಿನ ಮಳೆಗೈಯಲು ಆರಂಭಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿದಾಳಿ ನಡೆಸಿ ಸಮರ್ಥವಾಗಿ ನಕ್ಸಲರನ್ನು ಹಿಮ್ಮೆಟ್ಟಿದ್ದರಿಂದ ನಕ್ಸಲೀಯರು ಅಲ್ಲಿಂದ ಕಾಲ್ಕಿತ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಶೋಧ ಕಾರ್ಯದ ವೇಳೆ ಐವರು ನಕ್ಸಲರ ಮೃತದೇಹ ಸಿಕ್ಕಿತು. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.