ದೇಶ

ಕೋವಿಡ್-19 ಪ್ರಸರಣ, ಆರ್ಥಿಕತೆ ಹಾಳುಗೆಡವಿದ್ದಕ್ಕೆ ಕೇಂದ್ರದ ವಿರುದ್ಧ ರಾಹುಲ್ ಕಿಡಿ 

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್-19 ಪ್ರಸರಣ, ಆರ್ಥಿಕತೆ ಹಾಳುಗೆಡವಿದ್ದಕ್ಕೆ ಕೇಂದ್ರದ ವಿರುದ್ಧ ರಾಹುಲ್ ಕಿಡಿ 
ಕೋವಿಡ್-19 ಪ್ರಸರಣ, ಆರ್ಥಿಕತೆ ಹಾಳುಗೆಡವಿದ್ದಕ್ಕೆ ಕೇಂದ್ರದ ವಿರುದ್ಧ ರಾಹುಲ್ ಕಿಡಿ
Published On :

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಭಾರತದ ಜಿಡಿಪಿ 2020 ನೇ ಸಾಲಿನಲ್ಲಿ ಬಾಂಗ್ಲಾದೇಶಕ್ಕಿಂತ ಕಡಿಮೆ ಬಂದಿರುವ ಹಾಗೂ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಅಂಕಿ-ಅಂಶಗಳನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಆರ್ಥಿಕತೆಯನ್ನು ಸಂಪೂರ್ಣವಾಗಿ ಹಾಳು ಮಾಡುವುದು ಹೇಗೆ ಹಾಗೂ ಕೋವಿಡ್-19 ನ್ನು ಗರಿಷ್ಠ ಪ್ರಸರಣ ಮಾಡುವುದು ಹೇಗೆ ಎಂದು ಟ್ವಿಟರ್ ನಲ್ಲಿ ಬರೆದು ಅಂಕಿ-ಅಂಶಗಳನ್ನು ಹಂಚಿಕೊಂಡಿದ್ದಾರೆ. 

ಆರ್ಥಿಕತೆಯಷ್ಟೇ ಅಲ್ಲದೇ ಕೋವಿಡ್-19 ನ್ನು ಪಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶ, ವಿಯೆಟ್ನಾಮ್ ಅತ್ಯುತ್ತಮವಾಗಿ ನಿರ್ವಹಣೆ ಮಾಡುತ್ತಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಆರ್ಥಿಕತೆ ವಿಷಯವಾಗಿ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವುದು ಇದೇ ಮೊದಲೇನು ಅಲ್ಲ. 

ಕೆಲವೇ ವರ್ಷಗಳ ಹಿಂದೆಯೂ ಭಾರತದ ಆರ್ಥಿಕತೆ  ಇಂದು ಇರುವ ಸ್ಥಿತಿಗೆ ಬರಲಿದೆ ಎಂದು ಯಾರೂ ಊಹಿಸಿರಲಿಲ್ಲ. ಕೋವಿಡ್-19 ಭಾಗಶಃವಷ್ಟೇ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ತಪ್ಪನ್ನು ಒಪ್ಪಿಕೊಳ್ಳಿ, ತಿದ್ದಿಕೊಳ್ಳಿ, ದೇಶದಲ್ಲಿ ಲಭ್ಯವಿರುವ ಪ್ರತಿಭೆ ಹಾಗೂ ಪರಿಣತಿಯನ್ನು ಬಳಸಿಕೊಳ್ಳಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.