ಸಿಎಂ ಶಿವರಾಜ್ ಸಿಂಗ್ ಚೌಹಾಣ್ ರೋಡ್ ಶೋ ವೇಳೆ ಕೋವಿಡ್ ನಿಯಮ ಉಲ್ಲಂಘನೆ: ಎಫ್ಐಆರ್ ದಾಖಲು
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ನಡೆಸಿದ ರೋಡ್ ಶೋ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಇಂದೋರ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ನಡೆಸಿದ ರೋಡ್ ಶೋ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ನವೆಂಬರ್ 3 ರಂದು ಉಪಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದೋರ್‌ನ ಸನ್ವೇರ್ ಪ್ರಾಂತ್ಯದಲ್ಲಿ ರೋಡ್ ಶೋ ನಡೆಸಿದ್ದರು. ಈ ವೇಳೆ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘ಕೆಲವೊಂದು ಷರತ್ತಿನಡಿ ರೋಡ್ ಶೋ ನಡೆಸಲು ಅನುಮತಿಯನ್ನು ನೀಡಲಾಗಿತ್ತು. ರೋಡ್ ಶೋ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿತ್ತು. ಅಲ್ಲದೇ ಕೇವಲ 5 ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
‘ರೋಡ್ ಶೋ ವೇಳೆ 20 ರಿಂದ 25 ವಾಹನಗಳಿದ್ದವು. ಈ ವೇಳೆ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಅಲ್ಲದೇ ಹಲವರು ಮುಖಗವಸನ್ನು ಕೂಡ ಧರಿಸಿಲ್ಲ ಎಂದು ಚುನಾವಣಾಧಿಕಾರಿ ಪತ್ರದಲ್ಲಿ ಹೇಳಿದ್ಧಾರೆ. ಹಾಗಾಗಿ ರೋಡ್ ಶೋಗೆ ಅನುಮತಿ ಪಡೆದ ದಿನೇಶ್ ಬನ್ಸವಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


