ಬಿಜೆಪಿ ನಾಯಕ ಏಕನಾಥ್ ಖಡ್ಸೆ ಎನ್ ಸಿಪಿ ಸೇರುತ್ತಾರೆ: ಮಹಾ ಸಚಿವ ಜಯಂತ್ ಪಾಟೀಲ್
ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

ಮುಂಬೈ: ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.
"ಅವರು (ಖಡ್ಸೆ) ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಎನ್‌ಸಿಪಿಗೆ ಸೇರಲಿದ್ದಾರೆ. ಅವರ ಸೇರ್ಪಡೆ ಎನ್‌ಸಿಪಿಯನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಖಡ್ಸೆ ಅವರು ಭ್ರಷ್ಟಾಚಾರದ ಆರೋಪದ ಮೇಲೆ 2016 ರಲ್ಲಿ ಅಂದಿನ ಬಿಜೆಪಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಿನಿಂದಲೂ ಅವರು ತೀವ್ರ ಬೇಸರದಲ್ಲಿದ್ದರು.
ಕಳೆದ ಕೆಲವು ದಿನಗಳಿಂದ ಖಾಡ್ಸೆ ಅವರು ಬಿಜೆಪಿ ತೊರೆದು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸೇರಬಹುದು ಎಂಬ ಉಹಾಪೋಹಗಳು ಇದ್ದವು. ಇದೀಗ ಅದು ನಿಜವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


