ಕೇಂದ್ರಕ್ಕೆ ಸೆಡ್ಡು: ವಿವಾದಿತ ಕೃಷಿ ಮಸೂದೆ ತಡೆಗೆ ಮಸೂದೆ ಜಾರಿಗೆ ಮುಂದಾದ ರಾಜಸ್ತಾನ ಸರ್ಕಾರ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಹೊಸ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದೆ.

ಜೈಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಹೊಸ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
ಹೌದು ಈ ಬಗ್ಗೆ ಸ್ವತಃ ಸಿಎಂ ಅಶೋಕ್ ಗೆಹ್ಲೂಟ್ ಅವರು ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ತಡೆಗೆ ತಾವು ಕೂಡ ಮಸೂದೆ ತರುವುದಾಗಿ ಹೇಳಿದ್ದಾರೆ. ಇತ್ತೀಚೆಗಷ್ಟೇ ಇದೇ ವಿಚಾರವಾಗಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಕೃಷಿ ಮಸೂದೆ ತಡೆಗೆ ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮತ್ತು ನಿರ್ಣಯಗಳನ್ನು ಅಂಗೀಕರಿಸಿತ್ತು. ಈ ಬೆಳವಣಿಗೆಯ ನಡುವೆಯೇ ರಾಜಸ್ಥಾನ ಸರ್ಕಾರ ಕೂಡ ಕೃಷಿ ಮಸೂದೆ ಬಿಲ್ ಜಾರಿಗೆ ತರುವುದಾಗಿ ಘೋಷಣೆ ಮಾಡಿದೆ.
ಕೃಷಿ ಕಾನೂನು ತಡೆಗೆ ಮಸೂದೆ ರೂಪಿಸಿ ಎಂದಿದ್ದ ಸೋನಿಯಾ
ಈ ಹಿಂದೆ ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾನೂನುಗಳ ವ್ಯಾಪ್ತಿಯಿಂದ ರಾಜ್ಯಗಳನ್ನು ಹೊರಗಿಡಲು ಸಾಧ್ಯವಾಗುವಂತೆ ರಾಜ್ಯಮಟ್ಟದಲ್ಲಿ ಕಾನೂನು ರಚಿಸುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


