ದೇಶದಲ್ಲಿಂದು 55,838 ಕೊರೋನಾ ಕೇಸ್ ಪತ್ತೆ; ಸತತ 5ನೇ ದಿನವೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆ!
ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರೆದಿದ್ದು, ಸತತ 4 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,838 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರೆದಿದ್ದು, ಸತತ 4 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,838 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ.
ಇನ್ನು ಒಂದೇ ದಿನ 702 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 1,16,616ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಗಮನಾರ್ಹ ವಿಚಾರವೆಂದರೆ ಒಂದೇ ದಿನ 79,415 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆ 68,74,518ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,15,812ಕ್ಕೆ ಇಳಿಕೆಯಾಗಿದೆ. ಕಳೆದ ಐದು ದಿನಗಳಿಂದ ದೇಶದಲ್ಲಿ ಸಕ್ರಿಯ ಪ್ರಕರಣಗಳು 8 ಲಕ್ಷಕ್ಕಿಂತಲೂ ಕಡಿಮೆ ದಾಖಲಾಗುತ್ತಿದ್ದು, ಈ ಬೆಳವಣಿಗೆಯು ದೇಶದಲ್ಲಿ ಕೊರೋನಾ ಅಬ್ಬರವನ್ನು ಕಡಿಮೆ ಮಾಡುತ್ತಿದೆ ಎಂಬುದನ್ನು ಸೂಚಿಸುತ್ತಿದೆಎಂದು ಹೇಳಲಾಗುತ್ತಿದೆ.
ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,69,984 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,86,70,363 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


