ದೇಶ

ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತ ವಿತರಣೆ: ಸಿಎಂ ಪಳನಿ ಸ್ವಾಮಿ ಘೋಷಣೆ

ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೋನ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತ ವಿತರಣೆ: ಸಿಎಂ ಪಳನಿ ಸ್ವಾಮಿ ಘೋಷಣೆ
ಇ ಪಳನಿಸ್ವಾಮಿ
Published On :

ತಿರುಚ್ಚಿ: ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೋನ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ಪುದುಕ್ಕೊಟ್ಟೈನಲ್ಲಿ ಇಂದು ವಿವಿಧ  ಸರ್ಕಾರಿ ಕಲ್ಯಾಣ ಯೋಜನೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಕೊರೋನಾ ಲಸಿಕೆ ಬಳಕೆಗೆ ಸಿಕ್ಕ ಬಳಿಕ, ತಮಿಳುನಾಡು ಸರ್ಕಾರವು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತದೆ  ಎಂದು ಹೇಳಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಪಳನಿಸ್ವಾಮಿ, ಕೊರೋನಾ ಅವಧಿಯಲ್ಲಿ ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಜಾಗೃತಿ ಅಭಿಯಾನದ ಕುರಿತು ಮಾಹಿತಿ ನೀಡಿದರು.

ಇತ್ತೀಚೆಗಷ್ಟೇ ಬಿಹಾರ ಉಪ ಚುನಾವಣೆ ನಿಮಿತ್ತ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೋನಾ ಲಸಿಕೆ ನೀಡುವ ಕುರಿತು ಘೋಷಣೆ ಮಾಡಿತ್ತು. ಬಿಹಾರ ಬಿಜೆಪಿ ಬೆನ್ನಲ್ಲೇ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಕೂಡ ಅದೇ ಹಾದಿಯಲ್ಲೇ ಸಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.