ಮಾನಸಿಕವಾಗಿ, ದೈಹಿಕವಾಗಿ ದಣಿದಿರುವ ನಿತೀಶ್ ಕುಮಾರ್ ಗೆ ಬಿಹಾರ ನಿರ್ವಹಣೆ ಸಾಧ್ಯವಿಲ್ಲ: ತೇಜಸ್ವಿ ಯಾದವ್
ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾನಸಿಕವಾಗಿ ಹಾಗೂ ದೈಹಿಕವಾಗಿ ದಣಿದಿದ್ದು ಬಿಹಾರವನ್ನು ಸಮರ್ಥವಾಗಿ ನಿರ್ವಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ.

ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾನಸಿಕವಾಗಿ ಹಾಗೂ ದೈಹಿಕವಾಗಿ ದಣಿದಿದ್ದು ಬಿಹಾರವನ್ನು ಸಮರ್ಥವಾಗಿ ನಿರ್ವಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಬಿಹಾರ ನೈಸರ್ಗಿಕ ವಿಕೋಪ ಸಂಭವಿಸಿದಾಗ ಸಿಎಂ ನಿತೀಶ್ ಕುಮಾರ್ ಎಲ್ಲಿದ್ದರು ಎಂದು ಎಲ್ಲರೂ ಪ್ರಶ್ನಿಸುತ್ತಿದ್ದರು ಎಂದು ಟೀಕಿಸಿದ್ದಾರೆ.
ಕಳೆದ 15 ವರ್ಷಗಳಲ್ಲಿ ಯಾವುದೇ ಉದ್ಯೋಗವಕಾಶ ಸೃಷ್ಟಿಯಾಗಿಲ್ಲ, ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ, ವಲಸಿಗರ ಸಂಖ್ಯೆ ಹೆಚ್ಚಿದೆ, ಬಡತನದ ಪ್ರಮಾಣ ಮತ್ತಷ್ಟು ಏರಿಕೆಯಾಗುತ್ತಿದೆ, ಪರಿಸ್ಥಿತಿ ಹೀಗಿರುವಾಗ ಯಾವ ಆಧಾರದ ಮೇಲೆ ಅವರು ಮತ ಕೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.
50ನೇ ವಯಸ್ಸಿಗೆ ಸರ್ಕಾರಿ ನೌಕರರ ನಿವೃತ್ತಿ ನೋಟಿಫಿಕೇಷನ್ ರದ್ದು ಪಡಿಸುವುದಾಗಿ ಯಾದವ್ ತಿಳಿಸಿದ್ದಾರೆ. ಮತದಾರರಿಗೆ ಆರೋಗ್ಯ ವಿಮೆ ಮಾಡಿಸಿಕೊಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದಾಗಿ ತೇಜಸ್ವಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


