ದೇಶ

ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ

ಉತ್ತರ ಕಾಶ್ಮೀರದ ಸೇಬು ಪಟ್ಟಣವಾದ ಸೊಪೋರ್ ನಲ್ಲಿ ಭದ್ರತಾ ಪಡೆಗಳು ಗುರುವಾರ ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
ಸಾಂದರ್ಭಿಕ ಚಿತ್ರ
Published On :

ಬಾರಾಮುಲ್ಲಾ: ಉತ್ತರ ಕಾಶ್ಮೀರದ ಸೇಬು ಪಟ್ಟಣವಾದ ಸೊಪೋರ್ ನಲ್ಲಿ ಭದ್ರತಾ ಪಡೆಗಳು ಗುರುವಾರ ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ, ರಾಷ್ಟ್ರೀಯ ರೈಫಲ್ಸ್, ಜಮ್ಮು-ಕಾಶ್ಮೀರ ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಸೊಪೋರ್ ನ ತುಜ್ಜರ್ ಶರೀಫ್ ನಲ್ಲಿ ಗುರುವಾರ ಬೆಳಿಗ್ಗೆ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಭದ್ರತಾ ಪಡೆಗಳು ಇಡೀ ಪ್ರದೇಶವನ್ನು  ಸುತ್ತುವರೆದು ಮನೆ-ಮನೆಯಲ್ಲಿ ಶೋಧ ನಡೆಸಿದ್ದರು. ಈ ವೇಳೆ, ಅಲ್ ಬದರ್ ನ ಇಬ್ಬರು ಉಗ್ರರ ಕುಟುಂಬದವರು ಶರಣಾಗುವಂತೆ ಅವರ ಮನವೊಲಿಸಿದ್ದಾರೆ. 

ಭದ್ರತಾ ಪಡೆಗಳ ಮಾತಿನಂತೆ ಅಡಗಿದ್ದ ಉಗ್ರರು ಇದೀಗ ಶರಣಾಗಿದ್ದಾರೆ.

ಕಳೆದ ವಾರ ಬಡ್ಗಾಮ್ ನಲ್ಲಿ ಓರ್ವ ಉಗ್ರ ಶರಣಾಗಿದ್ದ. ಕಳೆದ ಕೆಲ ತಿಂಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳ ಮುಂದೆ ಆರು ಉಗ್ರರು ಶರಣಾಗಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.