ಎನ್ ಸಿಪಿ ಸೇರಿದ ಏಕನಾಥ್ ಖಡ್ಸೆ, ಅವರು ಮೂಲ ಬಿಜೆಪಿ ಕಾರ್ಯಕರ್ತ ಅಲ್ಲ ಎಂದ ಕೇಂದ್ರ ಸಚಿವ
ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಏಕನಾಥ್ ಖಡ್ಸೆ ಅವರು ಶುಕ್ರವಾರ ಶರದ್ ಪವಾರ್ ನೇತೃತ್ವದಲ್ಲಿ ಅಧಿಕೃತವಾಗಿ ಎನ್‌ಸಿಪಿಗೆ ಸೇರಿದ್ದಾರೆ.

ಮುಂಬೈ: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಏಕನಾಥ್ ಖಡ್ಸೆ ಅವರು ಶುಕ್ರವಾರ ಶರದ್ ಪವಾರ್ ನೇತೃತ್ವದಲ್ಲಿ ಅಧಿಕೃತವಾಗಿ ಎನ್‌ಸಿಪಿಗೆ ಸೇರಿದ್ದಾರೆ.
ಖಡ್ಸೆ ಎನ್ ಸಿಪಿ ಸೇರ್ಪಡೆಗೆ ಹಲವು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಅವರು 'ಮೂಲ ಬಿಜೆಪಿ ಕಾರ್ಯಕರ್ತರಲ್ಲ' ಎಂದು ತಮ್ಮ ಪಕ್ಷದ ಮಾಜಿ ಸಹೋದ್ಯೋಗಿಯನ್ನು ಟೀಕಿಸಿದ್ದಾರೆ.
ದನ್ವೆ ಅವರು ಎರಡು ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಪಕ್ಷ ಸಂಘಟಿಸುವಲ್ಲಿ ಖಡ್ಸೆ ಅವರ ಕೊಡುಗೆ ಅಪಾರ ಮತ್ತು ಅವರಿಗೆ ಪಕ್ಷದಲ್ಲಿ ಸುದೀರ್ಘ ಭವಿಷ್ಯ ಇದೆ ಎಂದು ಶ್ಲಾಘಿಸಿದ್ದರು. ಆದರೆ ಇಂದು ಉಲ್ಟಾ ಹೊಡೆದ ಕೇಂದ್ರ ಸಚಿವರು, ಖಡ್ಸೆ ಅವರು ಮೂಲ ಬಿಜೆಪಿಗರಲ್ಲ. ಅವರು ಹಿಂದೆ ಕಾಂಗ್ರೆಸ್ ನಲ್ಲಿದ್ದರು ಎಂದು ಹೇಳಿದ್ದಾರೆ.
ಖಡ್ಸೆ ಅವರು ಭ್ರಷ್ಟಾಚಾರದ ಆರೋಪದ ಮೇಲೆ 2016 ರಲ್ಲಿ ಅಂದಿನ ಬಿಜೆಪಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಕ್ಷದಲ್ಲಿ ಅವರನ್ನು ಕಡೆಗಣಿಸಲಾಗಿತ್ತು. ಇದರಿಂದ ಬೇಸರಗೊಂಡ ಖಡ್ಸೆ ಅವರು ಎನ್ ಸಿಪಿ ಸೇರಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಖಾಡ್ಸೆ ಅವರು ಬಿಜೆಪಿ ತೊರೆದು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸೇರಬಹುದು ಎಂಬ ಉಹಾಪೋಹಗಳು ಇದ್ದವು. ಇದೀಗ ಅದು ನಿಜವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


