ಮುಂದಿನ ವರ್ಷದಿಂದ ಇನ್ನಷ್ಟು ಸ್ಥಳೀಯ ಭಾಷೆಗಳಲ್ಲಿ ಕೂಡ ಜೆಇಇ ಮುಖ್ಯ ಪರೀಕ್ಷೆ: ಸಚಿವ ರಮೇಶ್ ಪೋಖ್ರಿಯಾಲ್
ಮುಂದಿನ ವರ್ಷದಿಂದ ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಯನ್ನು ಹಲವು ಸ್ಥಳೀಯ ಭಾಷೆಗಳಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

ನವದೆಹಲಿ: ಮುಂದಿನ ವರ್ಷದಿಂದ ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಯನ್ನು ಹಲವು ಸ್ಥಳೀಯ ಭಾಷೆಗಳಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ಜಂಟಿ ಪ್ರವೇಶ ಮಂಡಳಿ(ಜೆಎಬಿ), ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ದೃಷ್ಟಿಕೋನದಡಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಪೋಖ್ರಿಯಾಲ್ ತಿಳಿಸಿದರು.
ನೂತನ ಶಿಕ್ಷಣ ನೀತಿ-2020ರಡಿಯಲ್ಲಿ ಜಂಟಿ ಪ್ರವೇಶ ಮಂಡಳಿ(ಜೆಎಬಿ) ಜೆಇಇ ಪರೀಕ್ಷೆಯನ್ನು ಮುಂದಿನ ವರ್ಷದಿಂದ ಹೆಚ್ಚು ಸ್ಥಳೀಯ ಭಾಷೆಗಳಲ್ಲಿ ನಡೆಸಲು ತೀರ್ಮಾನಿಸಿದೆ ಎಂದು ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸದ್ಯ ದೇಶಾದ್ಯಂತ ಇರುವ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಇಂಗ್ಲಿಷ್, ಹಿಂದಿ ಮತ್ತು ಗುಜರಾತಿ ಭಾಷೆಗಳಲ್ಲಿ ಜೆಇಇ ಪರೀಕ್ಷೆ ನಡೆಸಲಾಗುತ್ತಿತ್ತು. ಸ್ಥಳೀಯ ಭಾಷೆಗಳಲ್ಲಿ ಜೆಇಇ ಪರೀಕ್ಷೆಗಳನ್ನು ನಡೆಸಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಪರೀಕ್ಷೆಯ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಜೆಇಇ ಮುಖ್ಯ ಪರೀಕ್ಷೆ ಆಧಾರದ ಮೇಲೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಆಯಾ ರಾಜ್ಯ ಭಾಷೆಯನ್ನು ಸಹ ಇದರಡಿ ಸೇರಿಸಲಾಗುತ್ತದೆ.
ಕಳೆದ ವರ್ಷ ಗುಜರಾತಿ ಭಾಷೆಯಲ್ಲಿ ಮಾತ್ರ ಸ್ಥಳೀಯ ಭಾಷೆಗೆ ಆದ್ಯತೆ ನೀಡಿರುವುದನ್ನು ಪ್ರಶ್ನಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉಳಿದ ಸ್ಥಳೀಯ ಭಾಷೆಗಳಲ್ಲಿ ಕೂಡ ಬರೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


