ಭೀಮಾ ಕೊರೆಗಾಂವ್ ಪ್ರಕರಣ: ಸ್ಟ್ಯಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತ
ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾನವ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

ಮುಂಬೈ: ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾನವ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.
ಸ್ವಾಮಿ ಅವರನ್ನು ಜಾರ್ಖಂಡ್‌ನ ರಾಂಚಿಯಿಂದ ಅಕ್ಟೋಬರ್ 8ರಂದು ಬಂಧಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಮರುದಿನ ಅವರನ್ನು ಮುಂಬೈಗೆ ಕರೆದೊಯ್ದಿತ್ತು. ಇಳಿ ವಯಸ್ಸು ಹಾಗೂ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಆಧಾರದ ಮೇಲೆ ಮಧ್ಯಂತರ ಜಾಮೀನು ಕೋರಿ ಸ್ವಾಮಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ ಕಾರಣ ಅವರಿಗೆ ಸಹಿ ಹಾಕಲು ಕೂಡ ಸಾಧ್ಯವಾಗಿಲ್ಲ. ಹೀಗಾಗಿ ಅವರ ಹೆಬ್ಬೆರಳು ಗುರುತು ಪಡೆಯಲಾಗಿದೆ ಎಂದು ಸ್ವಾಮಿ ಪರ ವಕೀಲರಾದ ಶರೀಫ್ ಶೇಖ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಪ್ರಸ್ತುತ ಸ್ವಾಮಿ ಅವರನ್ನು ಮುಂಬೈನ ತಲೋಜ ಜೈಲಿನಲ್ಲಿರುವ ಕ್ಯಾರೆಂಟೈನ್ ವಾರ್ಡ್‌ನಲ್ಲಿ ಇರಿಸಲಾಗಿದೆ. ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾದವರ ಪೈಕಿ ಸ್ವಾಮಿ 16ನೇ ವ್ಯಕ್ತಿಯಾಗಿದ್ದಾರೆ. ಜಾರ್ಖಂಡ್ ನ ರಾಂಚಿಯ ತಮ್ಮ ನಿವಾಸದಲ್ಲಿದ್ದ ಸ್ವಾಮಿ ಅವರನ್ನು ಅಕ್ಟೋಬರ್ 9ರಂದು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ನಿಷೇಧಿತ ಸಿಪಿಐ (ಮಾವೊವಾದಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪದಡಿ ಅವರನ್ನು ಬಂಧಿಸಲಾಗಿತ್ತು. ಸ್ಟ್ಯಾನ್ ಸ್ವಾಮಿ ಮಾತ್ರವಲ್ಲದೆ ಈ ಪ್ರಕರಣದಲ್ಲಿ ಹದಿನಾರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ ಮತ್ತು ಭಯೋತ್ಪಾದಕಾ ನಿಗ್ರಹ ಕಾಯ್ದೆ-ಯುಪಿಎಪಿ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


