ದೇಶ

ಲಾಲೂ ಜೈಲಿನಿಂದ ಹೊರಬರುತ್ತಿದ್ದಂತೆ ನಿತೀಶ್ ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್

ಲಾಲೂ ಪ್ರಸಾದ್ ಯಾದವ್ ಜೈಲಿನಿಂದ ಹೊರಬರುತ್ತಿದ್ದಂತೆಯೇ, ಮಾರನೇ ದಿನವೇ ಬಿಹಾರ ಮುಖ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬೀಳ್ಕೊಡಲಾಗುತ್ತದೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಶುಕ್ರವಾರ ಹೇಳಿದ್ದಾರೆ.

ಲಾಲೂ ಜೈಲಿನಿಂದ ಹೊರಬರುತ್ತಿದ್ದಂತೆ ನಿತೀಶ್ ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್
ತೇಜಸ್ವಿ ಯಾದವ್
Published On :

ಪಾಟ್ನಾ: ಆಹಾರ ಹಗರಣ ಕೇಸ್ ನಲ್ಲಿ ಜಾಮೀನು ದೊರಕಿದ ನಂತರ ನವೆಂಬರ್ 9 ರಂದು ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್  ಜೈಲಿನಿಂದ ಹೊರಬರುತ್ತಿದ್ದಂತೆಯೇ, ಮಾರನೇ ದಿನವೇ ಬಿಹಾರ ಮುಖ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬೀಳ್ಕೊಡಲಾಗುತ್ತದೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಶುಕ್ರವಾರ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನವೆಂಬರ್ 10 ರಂದು ನಡೆಯಲಿದೆ.

ಆಹಾರ ಹಗರಣ ಕೇಸ್ ನಲ್ಲಿ ದೂಷಿ ಎಂದು ಸಾಬೀತಾದ ಬಳಿಕ ಲಾಲೂ ಪ್ರಸಾದ್ ಯಾದವ್ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚಿಗೆ ಚೈಬಾಸ ಖಜಾಂಜಿ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್ ನಿಂದ ಅವರಿಗೆ ಜಾಮೀನು ದೊರೆತಿದೆ. ಆದರೆ, ಡುಮ್ಕಾ ಖಜಾನೆ ವಂಚನೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಅವರು ಜೈಲಿನಿಂದ ಹೊರಗೆ ಬರಲು ಆಗಿಲ್ಲ.

ಲಾಲೂ ಜಾಮೀನು ಪಡೆದು ನವೆಂಬರ್ 9 ರಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ, ನಿತೀಶ್ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಲಿದ್ದಾರೆ ಎಂದು ಹೈಸುಹಾದಲ್ಲಿನ ಚುನಾವಣಾ ಪ್ರಚಾರದಲ್ಲಿ ತೇಜಸ್ವಿ ಯಾದವ್ ವಿಶ್ವಾಸ ವ್ಯಕ್ತಪಡಿಸಿದರು.

ನವೆಂಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಮತಗಳ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.