ದೇಶಾದ್ಯಂತ 24 ಗಂಟೆಗಳಲ್ಲಿ 54,366 ಜನರಿಗೆ ಕೊರೋನಾ: ಸತತ 5ನೇ ದಿನವೂ 60 ಸಾವಿರಕ್ಕಿಂತ ಕಡಿಮೆ ಕೇಸ್!
ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರಿದಿದ್ದು, ಸತತ 5 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ.

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರಿದಿದ್ದು, ಸತತ 5 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ.
ಶುಕ್ರವಾರ 54,366 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 77,61,312ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಒಂದೇ ದಿನ 690 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,17,306ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು 77,61,312 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 73,979 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಒಟ್ಟಾರೆ 6,95,509 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ದೇಶದಲ್ಲಿ ಪ್ರಸ್ತುತ 6,95,509 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,42,722 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,01,13,085 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


