ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಡಿಸೆಂಬರ್ 31 ಕಡೇ ದಿನ!
2019-20ನೇ ಸಾಲಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ.

ನವದೆಹಲಿ: 2019-20ನೇ ಸಾಲಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ.
ಖಾತೆಗಳನ್ನು ಲೆಕ್ಕಪರಿಶೋಧಿಸಬೇಕಾದ ತೆರಿಗೆದಾರರಿಗೆ, ಆದಾಯ-ತೆರಿಗೆ ರಿಟರ್ನ್ ಫೈಲಿಂಗ್ ಗಡುವನ್ನು 2021 ಜನವರಿ 31 ರವರೆಗೆ ಎರಡು ತಿಂಗಳು ವಿಸ್ತರಣೆ ಮಾಡಲಾಗಿದೆ.
2019-20ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಕಡೇ ದಿನವನ್ನು ಜುಲೈ 31ರಿಂದ ನವೆಂಬರ್ 30ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಮೇ ತಿಂಗಳಲ್ಲಿ ಪ್ರಕಟಿಸಿತ್ತು.
ಕೋವಿಡ್- 19 ಸಾಂಕ್ರಾಮಿಕ ರೋಗದಿಂದಾಗಿ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಉನ್ನತ ನೀತಿ ನಿರೂಪಣಾ ಸಂಸ್ಥೆಯಾದ ಕೇಂದ್ರೀಯ ನೇರ ತೆರಿಗೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ತೆರಿಗೆದಾರರಿಗೆ ಹೆಚ್ಚಿನ ಸಮಯವನ್ನು ನೀಡುವ ಸಲುವಾಗಿ ಗಡುವನ್ನು ವಿಸ್ತರಿಸಲಾಗಿದೆ ಎಂದು ಸಿಬಿಡಿಟಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


