ತ್ರಿವರ್ಣ ಧ್ವಜ ವಿವಾದ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿರನ್ನು ಬಂಧಿಸಿ, 'ದೇಶದ್ರೋಹ' ಪ್ರಕರಣ ದಾಖಲಿಸಲು ಬಿಜೆಪಿ ಆಗ್ರಹ!
ಭಾರತದ ಐಕ್ಯತೆ ಮತ್ತು ಸಾರ್ವಭೌಮತೆಯನ್ನು ಸಾರುವ ತ್ರಿವರ್ಣ ಧ್ವಜ ಕುರಿತಂತೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.

ನವದೆಹಲಿ: ಭಾರತದ ಐಕ್ಯತೆ ಮತ್ತು ಸಾರ್ವಭೌಮತೆಯನ್ನು ಸಾರುವ ತ್ರಿವರ್ಣ ಧ್ವಜ ಕುರಿತಂತೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.
ವಿಧಿ 370ರ ರದ್ಧತಿ ವೇಳೆ ಗೃಹ ಬಂಧನಕ್ಕೀಡಾಗಿ, 14 ತಿಂಗಳ ಗೃಹ ಬಂಧನದಿಂದ ಬಿಡುಗಡೆಗೊಂಡ ನಂತರ ಇತ್ತೀಚೆಗೆ ವರದಿಗಾರರನ್ನು ಉದ್ದೇಶಿಸಿ ಮಾತನಾಡಿದ್ದ ಮೆಹಬೂಬಾ ಮುಫ್ತಿ, ರಾಜ್ಯದ ಧ್ವಜವನ್ನು ಮರಳಿ ಸ್ಥಾಪಿಸಿದ ಬಳಿಕವೇ ರಾಷ್ಟ್ರ ಧ್ವಜವನ್ನು ಹಿಡಿಯಲಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ರಾಜ್ಯದ ಧ್ವಜವನ್ನು ಅಥವಾ 370ನೇ ವಿಧಿಯನ್ನು ಮರಳಿ ಸ್ಥಾಪಿಸುವುದು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಹೇಳಿದೆ.
ಈ ಬಗ್ಗೆ ಮಾತನಾಡಿರುವ ಬಿಜೆಪಿಯ ಜಮ್ಮು-ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ ಅವರು, 'ಮೆಹಬೂಬಾ ಮುಫ್ತಿ ಅವರು ದೇಶದ್ರೋಹಿ ಹೇಳಿಕೆಗಳನ್ನು ನೀಡಿರುವುದರ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಮುಫ್ತಿ ವಿರುದ್ಧ ದೇಶದ್ರೋಗ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಆಕೆಯನ್ನು ಜೈಲಿಗಟ್ಟಬೇಕು ಎಂದು ಹೇಳಿದ್ದಾರೆ.
ಅಂತೆಯೇ ಕಾಶ್ಮೀರದ ಜನರನ್ನು ಪ್ರಚೋದಿಸಬೇಡಿ ಎಂದು ಮೆಹಬೂಬಾ ಮುಫ್ತಿಯಂತಹ ನಾಯಕರಿಗೆ ನಾನು ಎಚ್ಚರಿಕೆ ನೀಡುತ್ತೇನೆ. ಶಾಂತಿ, ಸಹಜತೆ ಮತ್ತು ಸಹೋದರತ್ವವನ್ನು ಭಂಗಗೊಳಿಸಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ. ಏನಾದರೂ ತಪ್ಪು ಸಂಭವಿಸಿದಲ್ಲಿ, ಮೆಹಬೂಬಾ ಅವರೇ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಮ್ಮ ಪ್ರತಿ ಹನಿ ರಕ್ತವನ್ನೂ ರಾಷ್ಟ್ರಧ್ವಜ, ದೇಶ ಮತ್ತು ತಾಯ್ನಾಡಿಗಾಗಿ ತ್ಯಾಗ ಮಾಡಲಿದ್ದೇವೆ. ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ. ಹೀಗಾಗಿ ದೇಶದಲ್ಲಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಒಂದೇ ಧ್ವಜಾರೋಹಣ ಮಾಡಬೇಕು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


