ಬಿಹಾರ ಮೊದಲ ಹಂತದ ಚುನಾವಣೆ: ಬಹಿರಂಗ ಪ್ರಚಾರಕ್ಕಿಂದು ತೆರೆ
ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ಸಮರದಲ್ಲಿ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಗಳ ಅಬ್ಬರಕ್ಕೆ ಸೋಮವಾರ ತೆರೆ ಬೀಳಲಿದೆ.

ಪಾಟ್ನಾ: ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ಸಮರದಲ್ಲಿ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಗಳ ಅಬ್ಬರಕ್ಕೆ ಸೋಮವಾರ ತೆರೆ ಬೀಳಲಿದೆ.
ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸಲಿದ್ದು, ಅಕ್ಟೋಬರ್ 28ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಗೂ ಮುನ್ನ 48 ಗಂಟೆಗಳಿಗೂ ಮೊದಲೇ ಬಹಿರಂಗ ಪ್ರಚಾರವನ್ನು ಅಂತ್ಯಗೊಳಿಸಲಾಗುತ್ತದೆ.
ಮುಂದಿನ 24 ಗಂಟೆಗಳ ಕಾಲಗಳಲ್ಲಿ ರಾಜಕೀಯ ಪಕ್ಷಗಳ ನಾಯಕರು ಮನೆ ಮನೆಗಳಿಗೆ ತೆರಳಿ ಮತಯಾಚನೆ ಮಾಡಬಹುದಾಗಿದೆ.
ನವೆಂಬರ್ 3 ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು, ನವೆಂಬರ್ 7 ರಂದು ಮೂರನೇ ಹಾಗೂ ಅಂತಿಮ ಹಂತದ ಚುನಾವಣೆ ನಡೆಯಲಿದೆ. ನವೆಂಬರ್ 10 ರಂದು ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


