ಚತ್ತೀಸ್‍ಗಢ: ದಂತೇವಾಡದಲ್ಲಿ 32 ನಕ್ಸಲರು ಶರಣಾಗತಿ
ಚತ್ತೀಸ್‌ಗಢದ ಬಸ್ತಾರ್ ವಿಭಾಗದ ದಂತೇವಾಡದಲ್ಲಿ 32 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ.

ರಾಯ್‍ಪುರ: ಚತ್ತೀಸ್‌ಗಢದ ಬಸ್ತಾರ್ ವಿಭಾಗದ ದಂತೇವಾಡದಲ್ಲಿ 32 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ.
10 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 32 ಮಂದಿ ನಕ್ಸಲರು ನಿನ್ನೆ ಬಾರ್ಸೂರ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆಂದು ತಿಳಿದುಬಂದಿದೆ.
ಶರಣಾಗತಿ ಬಳಿಕ ಪ್ರತಿಕ್ರಿಯೆ ನೀಡಿರುವ ಮಾವೋವಾದಿಗಳು, ಜಿಲ್ಲಾ ಪೊಲೀಸರ ಪುನರ್ವಸತಿ ಅಭಿಯಾನದಿಂದ ನಾವು ಪ್ರಭಾವಿತರಾಗಿದ್ದೇವೆ. ನಮ್ಮ ಮಾವೋವಾದಿ ಸಿದ್ಧಾಂತಗಳು ನಿರಾಶೆ ಮೂಡಿಸಿದೆ ಎಂದು ತಿಳಿಸಿದ್ದಾರೆಂದು ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.
32 ಮಂದಿ ನಕ್ಸಲರಲ್ಲಿ 19 ಮಂದಿ ಬಕೆಲಿ ಗ್ರಾಮದ ನಿವಾಸಿಗಳಾಗಿದ್ದು, ನಾಲ್ವರು ಕೊರ್ಕೊಟ್ಟಿ, 3 ಉಡೆನಾರ್, ತುಮರಿಗುಂಡ ಮತ್ತು ಮಾತಾಸಿ ಗ್ರಾಮದವರಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ. ಆದರೆ, ಭದ್ರತಾ ಕಾರಣಗಳಿಂದಾಗಿ ನಕ್ಸಲರ ಗುರುತಿಕೆಯನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ಈ ಎಲ್ಲಾ 32 ನಕ್ಸಲರೂ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್ ಸಂಘಟನೆ, ಕ್ರಾಂತಿಕಾರಿ ಮಹಿಳಾ ಆದಿವಾಸಿ ಸಂಘಟನೆ, ಚೆಟ್ನಾ ನಾಟ್ಯ ಮಂಡಳಿ ಮತ್ತು ಜನಾತನಾ ಸರ್ಕಾರ ಗ್ರೂಪ್'ಗೆ ಸೇರಿದವರಾಗಿದ್ದಾರೆಂದು ತಿಳಿದುಬಂದಿದೆ.
ಶರಣಾಗತಿಯಾಗಿರುವ ಈ ಎಲ್ಲಾ ನಕ್ಸಲರೂ ಪೊಲೀಸ್ ಪಡೆಗಳ ಮೇಲೆ ನಡೆದಿದ್ದ ದಾಳಿಗಳು, ಮತದಾನ ಕ್ಷೇತ್ರಗಳ ಮೇಲೆ ನಡೆದಿದ್ದ ದಾಳಿಗಳು ಹಾಗೂ ಐಇಡಿ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಈ ಪೈಕಿ ಆರು ನಕ್ಸಲರ ತಲೆಗೆ ಬಹುಮಾನವನ್ನು ಪ್ರಕಟಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


