ಬುಧವಾರ ಬಿಹಾರದಲ್ಲಿ ರಾಹುಲ್ ಗಾಂಧಿ ಎರಡು ಚುನಾವಣಾ ರ‍್ಯಾಲಿ
ವಿಧಾನಸಭಾ ಚುನಾವಣೆ ನಡೆಯುತ್ತಿರುವ ಬಿಹಾರದಲ್ಲಿ ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎರಡು ಚುನಾವಣಾ ರ‍್ಯಾಲಿಗಳಲ್ಲಿ ಭಾಷಣ ಮಾಡಲಿದ್ದಾರೆ.

ನವದೆಹಲಿ: ವಿಧಾನಸಭಾ ಚುನಾವಣೆ ನಡೆಯುತ್ತಿರುವ ಬಿಹಾರದಲ್ಲಿ ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎರಡು ಚುನಾವಣಾ ರ‍್ಯಾಲಿಗಳಲ್ಲಿ ಭಾಷಣ ಮಾಡಲಿದ್ದಾರೆ.
ವಾಲ್ಮಿಕಿ ನಗರ್ ಮತ್ತು ಕುಶ್ವೇಶ್ವರ್ ಅಸ್ಥಾನದಲ್ಲಿ ಚುನಾವಣಾ ರ‍್ಯಾಲಿ ನಡೆಸಿ ಜನತೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.
ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮೂರು ಹಂತಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಮಧ್ಯೆ ಜೆಡಿಯು , ಮತ್ತಿತರ ಎರಡು ಪಕ್ಷಗಳೊಂದಿಗೆ ಬಿಜೆಪಿ ಪೈಪೋಟಿ ನಡೆಸುತ್ತದ್ದರೆ, ಆರ್ ಜೆಡಿ, ಎಡ ಪಕ್ಷಗಳೊಂದಿಗೆ ಮಹಾಘಟಬಂಧನ್ ಬ್ಯಾನರ್ ಅಡಿಯಲ್ಲಿ ಕಾಂಗ್ರೆಸ್ ಹೋರಾಟಕ್ಕಿಳಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


